Friday, May 17, 2024

ಹೊರಗಡೆ ಜೆಡಿಎಸ್​ ಪಕ್ಷದ ಹೆಸರೇಳಲು ಹೇಸಿಗೆ ಅನಿಸುತ್ತಿದೆ: ಸಮೃದ್ದಿ ಮಂಜುನಾಥ್​

ಬೆಂಗಳೂರು: ಪ್ರಜ್ವಲ್ ರೇವಣ್ಣ ರಾಸಲೀಲೆ ವೀಡಿಯೋ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಬಾರಿ ಮುಜುಗರವಾಗುತ್ತಿರುವ ಹಿನ್ನೆಲೆ ಪ್ರಜ್ವಲ್​ ರೇವಣ್ಣನನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಸ್ವಪಕ್ಷದ ಶಾಸಕರಿಂದಲೇ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಈ ಹಿನ್ನೆಲೆ ಮೊದಲ ಬಾರಿಗೆ ಶಾಸಕರಾಗಿರುವ ಸಮೃದ್ದಿ ಮಂಜುನಾಥ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಮುಳಬಾಗಿಲು ಶಾಸಕ ಸಮೃದ್ದಿ ಮಂಜುನಾಥ್​ ಅವರು,  ಇತ್ತಿಚಿನ ದಿನಗಳಲ್ಲಿ ‘ಹಾಸನದ ಲೀಲೆಗಳು’ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿರುವುದು ಪಕ್ಷದ ಸಾಮಾನ್ಯ ಕಾರ್ಯಕ್ರತರಾಗಿ ರಾಜ್ಯದಲ್ಲೆಡೆ ಮುಜುಗರಕ್ಕೆ ಒಳಗಾಗಿರುವುದಲ್ಲದೆ ಪಕ್ಷದ ಹೆಸರು ಹೇಳಲು ಸಹ ಹೇಸಿಗೆ ಅನಿಸುವಂತ ಸ್ಥಿತಿಗೆ ತಲುಪಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಅಮಾನತ್ತು ಮಾಡಿ: ಗುರುಮಿಟ್ಕಲ್ ಶಾಸಕ ಶರಣಗೌಡ ಕಂದಕೂರು

ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗದ ದಯನೀಯ ಪರಿಸ್ಥಿತಿ ಮೊದಲ ಬಾರಿಗೆ ಶಾಸಕನಾಗಿರುವ ನನಗೆ ಈ ಕಷ್ಟಕರ ಸನ್ನಿವೇಶಗಳು ಎದುರಾಗುತ್ತಿದ್ದರೆ, ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿಯಾದರೇನು ಯೋಚಿಸಿ?? ಮಾನ್ಯ ವರಿಷ್ಠರು ರಾಷ್ಟ್ರಾಧ್ಯಕ್ಷರು ಶ್ರೀ ಹೆಚ್.ಡಿ.ದೇವೇಗೌಡ ಅಪ್ಪಾಜಿ @H_D_Devegowda ರವರು, ರಾಜ್ಯಾಧ್ಯಕ್ಷರು ಶ್ರೀ ಹೆಚ್.ಡಿ.ಕುಮಾರಣ್ಣ @hd_kumaraswamy  ರವರು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಾದ ಸಮಯವಿದಾಗಿದೆ ಎಂದು ಹೇಳುವ ಮೂಲಕ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸುಂತೆ ಮನವಿ ಮಾಡಿಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ಅಮಾನತಿಗೆ ಶಾಸಕ ಶರಣಗೌಡ ಕಂದಕೂರು ಮನವಿ:

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿ ಗುರುಮಿಟ್ಕಲ್ ಶಾಸಕ ಶರಣಗೌಡ ಪಾಟೀಲ್ ಅವರು ತಮ್ಮ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​.ಡಿ ದೇವೇಗೌಡ ಅವರಿಗೆ ಪತ್ರವೊಂದನ್ನು ಬರೆದಿರುವ ಅವರು ಪ್ರಜ್ವಲ್ ರೇವಣ್ಣ ಅವರ ಪೆನ್​ಡ್ರೈವ್​ ಪ್ರಕರಣದಿಂದ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗುತ್ತಿದ್ದು ಪಕ್ಷದ ಹಿತಕ್ಕಾಗಿ ಈ ಕೂಡಲೇ ಪ್ರಜ್ವಲ್​ ರೇವಣ್ಣನನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES