Saturday, May 18, 2024

ಪ್ರಜ್ವಲ್ ರೇವಣ್ಣನನ್ನು ಪಕ್ಷದಿಂದ ಅಮಾನತ್ತು ಮಾಡಿ: ಗುರುಮಿಟ್ಕಲ್ ಶಾಸಕ ಶರಣಗೌಡ ಕಂದಕೂರು

ಯಾದಗಿರಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ವಿಡಿಯೋ ಕೇಸ್ ತನಿಖೆ ಚುರುಕು ಚುರುಕುಗೊಂಡ ಬೆನ್ನಲ್ಲೇ ಪ್ರಜ್ವಲ್​ ರೇವಣ್ಣ ಉಚ್ಚಾಟನೆಗೆ ಸ್ವಪಕ್ಷದವರಿಂದಲೇ ಕೂಗು ಕೇಳಿಬಂದಿದೆ. ಗುರುಮಿಟ್ಕಲ್​ ಶಾಸಕ ಶರಣಗೌಡ ಕಂದಕೂರು ಅವರು ಜೆಡಿಎಸ್​ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರಿಗೆ ದೂರು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣದಿಂದ ಪಕ್ಷಕ್ಕೆ ಮುಜುಗರ ಉಂಟಾಗಿರುವ ಬೆನ್ನಲ್ಲೇ ಅವರನ್ನು ಪಕ್ಷದಿಂದ ಅಮಾನತು ಕೂಡು ಕೇಳಿಬಂದಿದೆ. ಮೇಲ್ನೋಟಕ್ಕೆ ಪ್ರಜ್ವಲ್ ರೇವಣ್ಣ ತಪ್ಪಿತಸ್ಥರು ಎಂಬ ಭಾವನೆ ಉಂಟಾಗಿದೆ ಎಂದು ಕಂದಕೂರು ಅವರು ಪತ್ರದಲ್ಲಿ ಎಚ್​ಡಿಡಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಂಧನ ಭೀತಿಯಲ್ಲಿ ಹೊಳೆನರಸಿಪುರ ನಿವಾಸದಿಂದ ಅಜ್ಞಾತ ಸ್ಥಳಕ್ಕೆ ತೆರಳಿದ ರೇವಣ್ಣ

ಪತ್ರದಲ್ಲಿ ಏನಿದೆ?

ನಾನು ತುಂಬಾ ಕಿರಿಯ, ಅತ್ಯಂತ ಹಿರಿಯರಾದ ತಮಗೆ ಸಲಹೆ ಕೊಡುವಷ್ಟು ದೊಡ್ಡವನ್ನಲ್ಲ. ಆದರೆ ಪರಿಸ್ಥಿತಿ ಹಾಗೆ ಬಂದೊದಗಿದೆ. ಹೀಗಾಗಿ ತಮಗೆ ನಾನು ಪತ್ರ ಬರೆದು ನನ್ನ ಅಂತರಾಳದ ಅಭಿಪ್ರಾಯಗಳನ್ನು ಮುಕ್ತ ಮನಸ್ಸಿನಿಂದ ವ್ಯಕ್ತಪಡಿಸುತ್ತಿರುವೆ.

ಕೆಲದಿನಗಳಿಂದ ರಾಜ್ಯಾದ್ಯಂತ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ತುಣುಕುಗಳಿಂದ ಪಕ್ಷಕ್ಕೆ ತೀರಾ ಮುಂಜುಗರ ಉಂಟಾಗಿದೆ. ಸದರಿ ವಿಡಿಯೋ ದೃಶ್ಯಗಳಲ್ಲಿ ಸಂಸದರಾದ ಪ್ರಜ್ವಲ್ ರೇವಣ್ಣ ಅವರು ಕಾಣಿಸಿಕೊಂಡಿದ್ದಾರೆ. ಸದ್ಯ ಮೇಲ್ನೋಟಕ್ಕೆ ಅವರು ತಪ್ಪಿತಸ್ಥರೆಂದು ಭಾವನೆ ಉಂಟಾಗಿದೆ. ಪ್ರಯುಕ್ತ ಅವರನ್ನು ಕೂಡಲೇ ಪಕ್ಷದಿಂದ ಅಮಾನತು ಮಾಡಲು ತಮ್ಮಲ್ಲಿ ಕೋರುತ್ತೇನೆ.

ತಾವು ಆರು ದಶಗಳಿಗೂ ಮಿಕ್ಕಿ ನಡೆಸಿಕೊಂಡು ಬರುತ್ತಿರುವ ರಾಜಕೀಯ ಜೀವನ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ತತ್ವ-ಸಿದ್ಧಾಂತಗಳ ಬುನಾದಿಯ ಮೇಲೆ ಪಕ್ಷವನ್ನು ಸಮರ್ಥವಾಗಿ ಕಟ್ಟಿ ಬೆಳಿಸಿದ್ದೀರಿ. ರಾಷ್ಟ್ರದ ಪ್ರಧಾನಿಯಾದ ಮೊದಲ ಕನ್ನಡಿಗ ಎಂಬ ಅಭಿದಾನ ತಮ್ಮದಾಗಿದೆ. ಮಣ್ಣಿನ ಮಗನಾಗಿ ರೈತ ಜನಾಂಗದ ಏಳಿಗೆಗಾಗಿ ಸದಾ ಮಿಡಿಯುವ ನೇತರಾರರು ತಾವಾಗಿದ್ದೀರಿ. ಅದರಲ್ಲಿಯೂ ಹೆಣ್ಣು ಸಾಕ್ಷಾತ್ ಕಪಿಲಸಿದ್ದ ಮಲ್ಲಿಕಾರ್ಜುನ ಎಂಬ ಶರಣರ ವಾಣಿಯಂತೆ ಹೆಣ್ಣು ಮಕ್ಕಳನ್ನ ಗೌರವಾದರಗಳಿಂದ ನೋಡಿಕೊಂಡು ಬಂದಿದ್ದೀರಿ ಎಂದು ಪತ್ರದಲ್ಲಿ ಬರೆದಿದ್ದಾರೆ.

RELATED ARTICLES

Related Articles

TRENDING ARTICLES