Tuesday, May 21, 2024

ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ, ಇಂಥವರನ್ನ ಭಗವಂತನೂ ಕ್ಷಮಿಸಲ್ಲ : ಡಿ.ಕೆ. ಶಿವಕುಮಾರ್

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ಮೇಲೆ ಮಾಡಿರುವ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ. ಪೆನ್​ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಕುಮಾರಸ್ವಾಮಿ ಅವರಿಗೆ ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ರೆ ಬರಲ್ಲ ಎಂದು ಕುಟುಕಿದ್ದಾರೆ.

ವಿದೇಶಕ್ಕೆ ಹೋಗುವಾಗ ಜೊತೆಗೆ ಯಾರು ಇದ್ರು?

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ಏನು ಆಗಬೇಕೋ ಅದು ಆಗುತ್ತದೆ. ಹಾಗೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಅವರ ಜತೆಗೆ ಇದ್ದವರು ಯಾರು? ಯಾರು ಯಾರಿಗೆ ಕರೆ ಮಾಡಿದ್ರು ಅನ್ನೋದನ್ನ ಅವರನ್ನೇ ಕೇಳಬೇಕು ಎಂದು ತಿಳಿಸಿದ್ದಾರೆ.

ಬಿಜೆಪಿಯವರು ಬಗ್ಗೆ ಯಾಕೆ ಮಾತನಾಡುತ್ತಿಲ್ಲ?

ಇದು ಹಳೇ ವಿಡಿಯೋ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಪ್ರಜ್ವಲ್ ವಿಡಿಯೋ ಬಗ್ಗೆ ರೇವಣ್ಣ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಗುಸುಗುಸು ಚರ್ಚೆಯಾಗಿದ್ದು, ಈಗ ಬಹಿರಂಗವಾಗಿದೆ. ಬಿಜೆಪಿಯವರು ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಎನ್ನುವುದು ಎಲ್ಲರ ಪ್ರಶ್ನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES