Saturday, May 18, 2024

ನಮಗೆ ಈ ವಿಷಯ ಗೊತ್ತಿದ್ರೆ, ಮುಂಚೆಯೇ ವಿಚಾರ ಹೊರ ಬರುತ್ತಿತ್ತು : ಡಿ.ಕೆ. ಸುರೇಶ್

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಒಂದೊಂದೆ ಟ್ವಿಸ್ಟ್ ಪಡೆಯುತ್ತಿದೆ. ಈ ಪೆನ್ ಡ್ರೈ ಕಥೆ ಮುಂಚೆಯೇ ಡಿಕೆ ಬ್ರದರ್ಸ್​ಗೆ ಗೊತ್ತಿತ್ತು ಅನ್ನೋ ಹೊಸ ಬಾಂಬ್ ದೇವರಾಜೇಗೌಡ ಸಿಡಿಸಿದ್ದಾರೆ. ಈ ವಿಚಾರವಾಗಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ವಿಷಯ ಗೊತ್ತಿದ್ದರೇ ಈ ವಿಚಾರ ಇನ್ನು ಮುಂಚೆಯೇ ವಿಷಯ ಹೊರ ಬರುತ್ತಿತ್ತು. ಆರೋಪ ಮಾಡುವುದಕ್ಕಾಗಿ ನಮ್ಮ ಹೆಸರುಗಳನ್ನು ತರಲಾಗುತ್ತಿದೆ ಎಂದು ಹೇಳಿದ್ದಾರೆ.

ಗುಸು ಗುಸು ಸುದ್ದಿ ಹಾಸನದಲ್ಲಿ ಇತ್ತು. ಸೂಕ್ತ ದಾಖಲೆಗಳು ಇಲ್ಲದೇ ಮಾತನಾಡುವುದು ಸೂಕ್ತವಲ್ಲ. ಹಾಸನದ ಬಿಜೆಪಿ ನಾಯಕ ದೇವರಾಜೇಗೌಡ ಉನ್ನತ ನಾಯಕರಿಗೆ ಪತ್ರ ಬರೆದಿದ್ದರು. ಪ್ರಕರಣದ ಬಗ್ಗೆ ಪ್ರಧಾನಿಗಳು ಹಾಗೂ ಅವರ ಕಾರ್ಯಾಲಯ ಮತ್ತು ಕುಟುಂಬಕ್ಕೆ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟು ಎನ್​ಡಿಎ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ತಿಳಿಸಿದ್ದಾರೆ.

ವಿಚಾರ ಗೊತ್ತಿದ್ದರೂ ಮುಚ್ಚಿಟ್ಟಿರುವುದು ಅಪರಾಧ

ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಇದನ್ನು ಬೇರೆಯ ರೀತಿ ಬಿಂಬಿಸಲು ಹೊರಟಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಎಲ್ಲರೂ ಹೇಳುತ್ತಾರೆ. ಆದರೆ, ವಿಚಾರ ಗೊತ್ತಿದ್ದರೂ ಮುಚ್ಚಿಟ್ಟಿರುವುದು ಮಹಾ ಅಪರಾಧ. ಪ್ರಧಾನಿ ಹಾಗೂ ಪ್ರಧಾನ ಮಂತ್ರಿಗಳ ಕಾರ್ಯಾಲಯ ಪ್ರತಿಯೊಂದನ್ನು ತಿರುಚುವ ಕೆಲಸ ಮಾಡುತ್ತಿದೆ. ಹೆಣ್ಣು ಮಕ್ಕಳ ಮೇಲೆ ಎಷ್ಟು ಗೌರವವಿದೆ ಎನ್ನುವುದು ಪ್ರಧಾನಿ ಅವರ ಈ ಮಾತಿನಿಂದ ತಿಳಿಯುತ್ತದೆ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES