Tuesday, May 21, 2024

ಮಾಜಿ ಸಂಸದ ವಿ ಶ್ರೀನಿವಾಸ್ ಪ್ರಸಾದ್​ ಅಂತ್ಯಕ್ರಿಯೆ ಇಂದು: ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ

ಮೈಸೂರು: ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ವಿ ಶ್ರೀನಿವಾಸ ಪ್ರಸಾದ್ ಅವರು ಸೋಮವಾರ ನಿಧನರಾಗಿದ್ದು ಇವರ ಗೌರವಾರ್ಥ ಕರ್ನಾಟಕ ಸರ್ಕಾರವು ಮಂಗಳವಾರ ರಾಜ್ಯದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಿಸಿದೆ. ಶ್ರೀನಿವಾಸ ಪ್ರಸಾದ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದ ಕಾರಣ ಸೋಮವಾರ ನಿಧನರಾಗಿದ್ದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.

ಏಪ್ರಿಲ್ 30ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಎಲ್ಲ ಸರ್ಕಾರಿ ಕಚೇರಿಗಳು, ಎಲ್ಲ ಶಾಲಾ–ಕಾಲೇಜುಗಳಿಗೂ (ಪೂರ್ವ ನಿಗದಿಯಾಗಿರುವ ಪರೀಕ್ಷೆ ಹೊರತುಪಡಿಸಿ) ಮತ್ತು ಅನುದಾನ ಪಡೆಯುವ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ನೆಗೋಷಿಯೇಬಲ್ ಇನ್ಸ್‌ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಟೀಂ ಇಂಡಿಯಾ ನಾಯಕ ರೋಹಿತ್​ ಶರ್ಮಾ ಗೆ ಇಂದು 37ನೇ ಹುಟ್ಟುಹಬ್ಬದ ಸಂಭ್ರಮ

ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು (ಏ.30) ಸರ್ಕಾರ ರಜೆ ಘೋಷಿಸಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಶ್ರೀನಿವಾಸ ಪ್ರಸಾದ್ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

RELATED ARTICLES

Related Articles

TRENDING ARTICLES