Tuesday, May 21, 2024

ಪೆನ್​ ಡ್ರೈವ್​ ಬಿಡೋ ಚಿಲ್ಲರೆ ಕೆಲಸ ನಾನು ಮಾಡಲ್ಲ, ಚುನಾವಣೆ ಎದುರಿಸುತ್ತೇನೆ: ಡಿಕೆ ಶಿವಕುಮಾರ್​

ಬೆಂಗಳೂರು: ಹಾಸನ ಸಂಸದ, ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಿಸಿದ್ದಾರೆ.

ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಇದನ್ನೂ ಓದಿ: Prajwal Revanna Pendrive Case: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತಿಗೆ ಶಿಫಾರಸು

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಫೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಪ್ರಜ್ವಲ್‌ನನ್ನು ನನ್ನ ಮಗ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಹಳೆ ವಿಡಿಯೋ ಎಂದು ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಅವರು ಒಪ್ಪಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

 

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಉಡುಪಿಯಲ್ಲಿ ಪೋಟೊ ಹಿಡಿದು ಅಂತಾರಾಷ್ಟ್ರೀಯ ಮಹಿಳಾ ಆಯೋಗ ಕಳುಹಿಸಿದರು. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

RELATED ARTICLES

Related Articles

TRENDING ARTICLES