Tuesday, May 21, 2024

ಜಗದೀಶ್ ಶೆಟ್ಟರ್ ಗೆದ್ದರೆ ಕೇಂದ್ರ ಸಚಿವರಾಗುತ್ತಾರೆ : ಜನಾರ್ದನ ರೆಡ್ಡಿ

ಬೆಳಗಾವಿ : ಜಗದೀಶ್ ಶೆಟ್ಟರ್ ಗೆಲ್ಲಿದ್ದರೆ ಕೇಂದ್ರ ಸಚಿವರಾಗುತ್ತಾರೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಮದುರ್ಗ ಮತಕ್ಷೇತ್ರದ ಸುರೇಬಾನ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರ ಮಾಡಿದರು. ಈ ವೇಳೆ ಮಾತನಾಡಿ, ಶೆಟ್ಟರ್ ಅವರನ್ನು ಗೆಲ್ಲಿಸಿದರೆ ಅವರು ನರೇಂದ್ರ ಮೋದಿಯವರ ಜೊತೆಗೆ ಸೇರಿ ಕೇಂದ್ರದ ಸಚಿವರಾಗಿ, ಬೆಳಗಾವಿಯ ಸಮಗೃ ಅಭಿವೃದ್ಧಿ ಮಾಡುತ್ತಾರೆ ಹೇಳಿದ್ದಾರೆ.‌

ಜಗದೀಶ್ ಶೆಟ್ಟರ್ ಅವರು 6 ಬಾರಿ ಶಾಸಕರಾಗಿದ್ದಾರೆ. ಅವರಿಗೆ ಎಲ್ಲ ಹುದ್ದೆಗಳ ಅನುಭವ ಇದೆ. ಕಾಂಗ್ರೆಸ್ ಸರ್ಕಾರ ಪೊಳ್ಳು ಗ್ಯಾರಂಟಿಗಳಿಂದ ಅಧಿಕಾರಕ್ಕೆ ಬಂದಿದೆ.‌ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ.‌ ಅನೇಕ ವಸ್ತುಗಳ ಬೆಲೆ ಏರಿಕೆ ಆಗಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ನಿಮ್ಮ ಆಸ್ತಿ 55% ಕಿತ್ತುಕೊಳ್ಳುತ್ತಾರೆ

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಒಬ್ಬ ಮನುಷ್ಯ ಮರಣ ಹೊಂದಿದ ನಂತರ, ಶೇ.55% ಆಸ್ತಿ ಸರ್ಕಾರದ ಪಾಲಾಗಲಿದೆ. ಹಾಗಾಗಿ, ನಾವು ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಅವರ ಗ್ಯಾರಂಟಿಗಳಿಗೆ ನಾವು ಆಸೆ ಪಟ್ಟರೆ, ನಿಮ್ಮ ಆಸ್ತಿ 55% ಕಿತ್ತುಕೊಳ್ಳುತ್ತಾರೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.

ಭಾರದ ಮುಂದಿನ ಪ್ರಧಾನಿ ಮೋದಿ

ಶಂಕರ ಪಾಟೀಲ್ ಮುನೆನಕೊಪ್ಪ ಮಾತನಾಡಿ, ನರೇಂದ್ರ ಮೋದಿವರನ್ನು ಮೂರನೇ ಸಲ ಪ್ರಧಾನಿ ಮಾಡಬೇಕು ಎಂದು ಎಲ್ಲರೂ ತೀರ್ಮಾನಕ್ಕೆ ಬಂದಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಪ್ರಪಂಚದ ಪ್ರತಿಯೊಂದು ಹಳ್ಳಿಯಲ್ಲೂ ಭಾರದ ಮುಂದಿನ ಪ್ರಧಾನಿ ನರೇಂದ್ರ ಮೋದಿಯವರು ಆಗಬೇಕು ಎಂದು ಜನ ಬಯಸಿದ್ದಾರೆ.‌ ಸೂರ್ಯ ಚಂದ್ರ ಹುಟ್ಟುವುದು ಎಷ್ಟು ಸತ್ಯವೋ, ಅದೇ ರೀತಿ ನರೇಂದ್ರ ಮೋದಿ ಮೂರನೇ ಸಲ ಪ್ರಧಾನಿ ಆಗುವುದು ಅಷ್ಟೇ ಸತ್ಯ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES