Tuesday, May 21, 2024

ಟಾಸ್ ಗೆದ್ದ ಲಕ್ನೋ ಬೌಲಿಂಗ್ : LSGಗೆ ಬೆಂಕಿ ಬೌಲರ್ ಕಂಬ್ಯಾಕ್, ಇಂದು ಮುಂಬೈ ಗೆಲ್ಲುತ್ತಾ? ಕಾಮೆಂಟ್ ಮಾಡಿ

ಬೆಂಗಳೂರು : ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆ.ಎಲ್. ರಾಹುಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಲಕ್ನೋ ತಂಡಕ್ಕೆ ಯುವ ವೇಗಿ ಮಾಯಂಕ್ ಯಾದವ್ ಕಂಬ್ಯಾಕ್ ಮಾಡಿದ್ದಾರೆ.

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ (ಏಕನಾ) ಸ್ಟೇಡಿಯಂನಲ್ಲಿ ಐಪಿಎಲ್​ನ 48ನೇ ಪಂದ್ಯ ನಡೆಯುತ್ತಿದೆ. ಇಂದಿನ ಪಂದ್ಯದ ಗೆಲುವು ಉಭಯ ತಂಡಗಳಿಗೂ ಮಹತ್ವದ್ದಾಗಿದೆ.

ಐಪಿಎಲ್​ನಲ್ಲಿ 4 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ. ಈ ಪೈಕಿ ಲಕ್ನೋ 3 ಪಂದ್ಯಗಳನ್ನು ಗೆದ್ದಿದೆ. ಮುಂಬೈ ಇಂಡಿಯನ್ಸ್ ಒಂದು ಪಂದ್ಯ ಗೆದ್ದಿದೆ. ಕಳೆದ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಗೆಲುವಿನ ನಗೆ ಬೀರಿತ್ತು.

ಪ್ರಸಕ್ತ ಆವೃತ್ತಿಯಲ್ಲಿ ಮುಂಬೈ 9 ಪಂದ್ಯಗಳನ್ನು ಆಡಿದೆ. ಈ ಪೈಕಿ 3 ಪಂದ್ಯಗಳನ್ನು ಗೆದ್ದಿದ್ದು, 6 ಪಂದ್ಯಗಳಲ್ಲಿ ಸೋಲು ಕಂಡಿದೆ. ಲಕ್ನೋ ಸಹ 9 ಪಂದ್ಯಗಳನ್ನು ಆಡಿದ್ದು, 5 ಪಂದ್ಯಗಳಲ್ಲಿ ಗೆಲುವು ಹಾಗೂ 4 ಪಂದ್ಯ ಸೋತಿದೆ. ಲಕ್ನೋ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದರೆ, ಮುಂಬೈ ಇಂಡಿಯನ್ಸ್​ 9ನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್

ಇಶಾನ್ ಕಿಶನ್ (ವಿ.ಕೀ.), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನೆಹಾಲ್ ವಧೇರಾ, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಜೆರಾಲ್ಡ್ ಕೋಟ್ಜಿ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ

ಲಕ್ನೋ ಸೂಪರ್ ಜೈಂಟ್ಸ್

ಕೆ.ಎಲ್ ರಾಹುಲ್(ನಾಯಕ/ವಿ.ಕೀ.), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಷ್ಟನ್ ಟರ್ನರ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್, ಮಯಾಂಕ್ ಯಾದವ್

RELATED ARTICLES

Related Articles

TRENDING ARTICLES