Saturday, May 18, 2024

Prajwal Revanna Pendrive Case: ಇದನ್ನು ಸಹಿಸುವುದಿಲ್ಲ, ಮಾತೃಶಕ್ತಿ ಜೊತೆ ನಿಲ್ಲುತ್ತೇವೆ: ಅಮಿತ್​ ಶಾ

ಗುವಾಹತಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ‘ಅಶ್ಲೀಲ ವಿಡಿಯೋ’ ಗಳ ಪೆನ್​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿ ಇದೇ ಮೊದಲ ಬಾರಿಗೆ ಗುವಾಹಟಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಇದೊಂದು ಬಹಳ ಆಘಾತಕಾರಿ ಘಟನೆಯಾಗಿದೆ. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ. ನಾವು ದೇಶದ ‘ಮಾತೃಶಕ್ತಿ’ ಜೊತೆ ನಿಲ್ಲುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾನು ಕಾಂಗ್ರೆಸ್ ಸರ್ಕಾರವನ್ನು ಕೇಳಲು ಬಯಸುತ್ತೇನೆ. ಕರ್ನಾಟಕದಲ್ಲಿ ಯಾರ ಸರ್ಕಾರವಿದೆ? ಅವರ್ಯಾಕೆ ಇದುವರೆಗೆ ಕ್ರಮ ಕೈಗೊಂಡಿಲ್ಲ?. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಯಾಗಿದೆ ಎಂದರು.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣಗೆ ಪ್ರಕರಣಕ್ಕೆ ಸಂಬಂಧಿಸಿದ 32 GB, 8 GB ಪೆನ್‌ಡ್ರೈವ್‍ಗಳು SIT ವಶಕ್ಕೆ

ನಾವು ತನಿಖೆಯ ಪರವಾಗಿದ್ದೇವೆ, ತನಿಖೆ ನಡೆಯಲಿ. ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯ, ಹೀಗಾಗಿ ನಾವು ಈ ಬಗ್ಗೆ ಕ್ರಮ ಕೈಗೊಳ್ಳಲು ಆಗಲ್ಲ. ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಕೂಡ ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಇಂದು ಅವರ ಕೋರ್ ಕಮಿಟಿ ಸಭೆ ಇದ್ದು, ಕ್ರಮಕೈಗೊಳ್ಳಲಿದ್ದಾರೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES