Friday, May 17, 2024

Prajwal Revanna Pendrive Case: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತಿಗೆ ಶಿಫಾರಸು

ಹುಬ್ಬಳ್ಳಿ: ಪವರ್ ಟಿವಿ ಬಿಗ್​ ಇಂಪ್ಯಾಕ್ಟ್​, ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ವೀಡಿಯೋಗೆ ಸಂಬಂಧಿಸಿ ಪವರ್ ಟಿವಿ ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಜೆಡಿಎಸ್‌ ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗಿದೆ. ಪ್ರಜ್ವಲ್‌ ಅವರನ್ನು ಉಚ್ಚಾಟನೆ ಮಾಡುವ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಇದನ್ನೂ ಓದಿ: Prajwal Revanna Pendrive Case: ಇದನ್ನು ಸಹಿಸುವುದಿಲ್ಲ, ಮಾತೃಶಕ್ತಿ ಜೊತೆ ನಿಲ್ಲುತ್ತೇವೆ: ಅಮಿತ್​ ಶಾ

ಹುಬ್ಬಳ್ಳಿಯಲ್ಲಿ ಇಂದು ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಗಂಭೀರ ಆರೋಪ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೋರ್ ಕಮಿಟಿ ಅಧ್ಯಕ್ಷ ಮಾಜಿ ಸಚಿವ ಜಿ.ಟಿ. ದೇವೇಗೌಡ, ಪ್ರಜ್ವಲ್‌ ರೇವಣ್ಣ ಮೇಲೆ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಸ್‌ಐಟಿಗೆ ತನಿಖಾ ಹೊಣೆ ನೀಡಿರುವ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರಿಂದ ಮಹಿಳೆಯರಿಗೆ ಸಾಕಷ್ಟು ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES