Friday, May 17, 2024

ಕೋವಿಶೀಲ್ಡ್​ ಲಸಿಕೆಯಿಂದ ಅಡ್ಡಪರಿಣಾಮ: ಒಪ್ಪಿಕೊಂಡ ಔಷಧಿ ತಯಾರಿಕಾ ಕಂಪೆನಿ

ಭಾರತದಲ್ಲಿ ಕೋವಿಡ್​ ಸಂದರ್ಭದಲ್ಲಿ ಅತಿ ಹೆಚ್ಚಾಗಿ ಕೋವಿಶೀಲ್ಡ್ ಲಸಿಕೆ ಬಳಕೆ ಮಾಡಲಾಗಿತ್ತು, ಈ ಕೋವಿಶೀಲ್ಡ್​ ಔಷಧಿಯಿಂದ ಅಡ್ಡಪರಿಣಾಮಗಳಾಗುತ್ತಿವೆ ಎನ್ನುವ ಆರೋಪಗಳು ಕೇಳಿಬಂದಿತ್ತು. ಈ ಬಗ್ಗೆ ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ.

ಅಸ್ಟ್ರಾಜೆನೆಕಾ(AstraZeneca) ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು.

ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ತನ್ನ ಲಸಿಕೆಯಿಂದ ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮ ಉಂಟಾಗಬಹುದು, ಆದರೆ ಲಸಿಕೆ ಪಡೆಯದವರಲ್ಲೂ ಟಿಟಿಎಸ್ ಕಾಣಿಸಿಕೊಳ್ಳಬಹುದು. ಆದ್ದರಿಂದ ಈ ಕುರಿತು ವಿಸ್ತೃತ ಅಧ್ಯಯನದ ಅಗತ್ಯವಿದೆ ಎಂದು ಅಸ್ಟ್ರಾಜೆನೆಕಾ ಪ್ರತಿಪಾದಿಸಿದೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣಗೆ ಪ್ರಕರಣಕ್ಕೆ ಸಂಬಂಧಿಸಿದ 32 GB, 8 GB ಪೆನ್‌ಡ್ರೈವ್‍ಗಳು SIT ವಶಕ್ಕೆ

ಇದೇ ಆಸ್ಟ್ರಾಜೆನಿಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್‌ಸ್ಟಿಟ್ಯೂಟ್‌ ಕೋವಿಶೀಲ್ಡ್‌ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಮತ್ತು ಭಾರತದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ ಕೂಡಾ ಇದೇ ಆಗಿದ್ದ ಕಾರಣ, ಲಂಡನ್‌ ನ್ಯಾಯಾಲಯದಲ್ಲಿ ಆಸ್ಟ್ರಾಜೆನಿಕಾ ನೀಡಿದ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಟಿಟಿಎಸ್ ಸಿಂಡ್ರೋಮ್ ಎಂದರೇನು? ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ದೇಹದಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯನ್ನು ಉಂಟು ಮಾಡುತ್ತದೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದಾಗಿ ಪಾರ್ಶ್ವವಾಯು, ಹೃದಯಸ್ತಂಭನ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಇದು ಪ್ಲೇಟ್​ಲೆಟ್​ಗಳಸ ಸಂಖ್ಯೆಯನ್ನೂ ಕೂಡ ಕಡಿಮೆ ಮಾಡುತ್ತದೆ.

ಕಂಪನಿ ಹೇಳಿದ್ದೇನು?: ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನೆಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES