Tuesday, May 21, 2024

ಪ್ರಜ್ವಲ್​ ರೇವಣ್ಣಗೆ ಪ್ರಕರಣಕ್ಕೆ ಸಂಬಂಧಿಸಿದ 32 GB, 8 GB ಪೆನ್‌ಡ್ರೈವ್‍ಗಳು SIT ವಶಕ್ಕೆ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ SIT ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಪೈಕಿ 32 ಜಿಬಿ ಮತ್ತು 8 ಜಿಬಿ ಎರಡು ಪೆನ್ ಡ್ರೈವ್‍ಗಳು ವಶಕ್ಕೆ ಪಡೆದಿರುವ ಅಧಿಕಾರಿಗಳು ಸತ್ಯಾಸತ್ಯತೆ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇದೆಲ್ಲ ಷಡ್ಯಂತ್ರ, ಇದಕ್ಕೆಲ್ಲಾ ಹೆದರಿ ಓಡಿಹೋಗುವುದಿಲ್ಲ: ಹೆಚ್​.ಡಿ ರೇವಣ್ಣ

ಈ ಎರಡು ಪೆನ್‍ಡ್ರೈವ್‍ಗಳನ್ನು FSLಗೆ ರವಾನೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಮೂಲಕ ತಾಂತ್ರಿಕ ಸಾಕ್ಷ್ಯ ಕಲೆಹಾಕಲು ತಯಾರಿ ನಡೆಸಲಾಗುತ್ತಿದೆ. ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯಿಂದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇರೆಗೆ ಪೊಲೀಸರು FIR ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 354 ಎ ಲೈಂಗಿಕ ಕಿರುಕುಳ, 354ಡಿ, 506, 509 ಅಡಿಯಲ್ಲಿ FIR ದಾಖಲಿಸಲಾಗಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನೂ ನಿರ್ವಹಿಸುವಂತೆ ಎಸ್‍ಐಟಿಗೆ ಆದೇಶಿಸಿದೆ.

RELATED ARTICLES

Related Articles

TRENDING ARTICLES