Tuesday, May 21, 2024

ಬೌದ್ದ ಧರ್ಮದ ವಿಧಿ ವಿಧಾನಗಳಂತೆ ವಿ.ಶ್ರೀನಿವಾಸ್ ಪ್ರಸಾದ್​ ಅಂತ್ಯಕ್ರಿಯೆ

ಮೈಸೂರು:  ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಅಂತ್ಯಕ್ರಿಯೆ ಮೈಸೂರಿನ ಅಶೋಕಪುರಂನ ಡಾ.ಬಿ.ಆರ್ ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಬೌದ್ಧ ಧರ್ಮದ ವಿಧಿ-ವಿಧಾನದಂತೆ ನೆರವೇರಿತು.

ಅಂತ್ಯಕ್ರಿಯೆಯೂ ಬೌದ್ದಧರ್ಮದಂತೆ ವಿಧಿ-ವಿಧಾನಗಳು ನೆರವೇರಿತು. ಈ ವೇಳೆ ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು. ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ಪುಣ್ಯಾನುಮೋದನೆ ಬಳಿಕ ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯ ಮಗನ ಸಾವಿನ ದಿನ ಏನೇನಾಯಿತು ಎಲ್ಲವು ಹೊರಬರಲಿದೆ: ಸಿಎಂಗೆ ಕುಮಾರಸ್ವಾಮಿ ಎಚ್ಚರಿಕೆ

ಅಂತ್ಯಕ್ರಿಯೆಗೂ ಮುನ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಮೃತರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಈ ವೇಳೆ ಸಾವಿರಾರು ಜನ ಸೇರಿದ್ದು, ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿತ್ತು.

ಅಂತ್ಯಕ್ರಿಯೆಗೂ ಮುನ್ನ ಸಚಿವ ಮಹದೇವಪ್ಪ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೈಸೂರು – ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ವಡೆಯರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES