Tuesday, May 21, 2024

ನಾನು ಬದುಕಿರುವ ವರೆಗೆ ಮುಸ್ಲೀಮರಿಗೆ ಮೀಸಲಾತಿ ಪಾಲು ನೀಡಲು ಬಿಡುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ನಾನು ಬದುಕಿರುವವರೆಗೂ ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿಗಳಿಗೆ ಸಿಗುತ್ತಿರುವ ಮೀಸಲಾತಿಯ ಪಾಲನ್ನು ಧರ್ಮದ ಆಧಾರದಲ್ಲಿ ಮುಸ್ಲಿಮರಿಗೆ ಕೊಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್​ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದನ್ನು ಪ್ರೇರೇಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಅಲ್ಲದೆ, ತಮ್ಮ ಮೂರನೇ ಅವಧಿಯಲ್ಲಿ ಸಂವಿಧಾನದ 75 ನೇ ವರ್ಷವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Pendrive Case: ಇದು ರಾಜ್ಯಕ್ಕೆ ಕಳಂಕ, ಮಾನವ ಕುಲಕ್ಕೆ ಅಪಮಾನ- ಎಸ್ ನಾರಾಯಣ್ ಆಕ್ರೋಶ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಪರೋಕ್ಷ ದಾಳಿ ನಡೆಸಿದ ಮೋದಿ, ರಾಜ್ಯದಲ್ಲಿ ಡಬಲ್ ಆರ್ (ಆರ್​ಆರ್​ಆರ್​​) ತೆರಿಗೆ ಮೂಲಕ ಸಂಗ್ರಹಿಸಿದ ಹಣವನ್ನು ದೆಹಲಿಗೆ ಹರಿಸಲಾಗುತ್ತಿದೆ ಎಂದು ಆರೋಪಿಸಿದರು. ಜಾಗತಿಕ ಮೆಚ್ಚುಗೆ ಪಡೆದ ಬ್ಲಾಕ್ಬಸ್ಟರ್ ತೆಲುಗು ಚಿತ್ರ ‘ಆರ್​ಆರ್​​ಆರ್​ ಅನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES