Tuesday, May 21, 2024

ಪ್ರಜ್ವಲ್​ ಪೆನ್​ಡ್ರೈವ್​ ಪ್ರಕರಣ: ಸಂಕಷ್ಟದಿಂದ ಪಾರಾಗಲು ಹೋಮದ ಮೊರೆ ಹೋದ ರೇವಣ್ಣ

ಹಾಸನ: ಸಂಸದ ಪ್ರಜ್ವಲ್​ ರೇವಣ್ಣ ರಾಸಲೀಲೆ ವೀಡಿಯೊಗಳ ಪೆನ್​ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ A1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸದ್ಯ ಸಂಕಷ್ಟದಿಂದ ಪಾರಾಗಲು ದೇವರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ತಮ್ಮ ಮನೆಯಲ್ಲಿ ಅಗ್ನಿಕುಂಡ ನಿರ್ಮಿಸಿ ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬೆಳ್ಳಂ ಬೆಳಗ್ಗೆಯೇ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮಾಜಿ ಸಚಿವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಎಲ್ಲ ಸಂಕಷ್ಟಗಳು ದೂರವಾಗಲೆಂದು ಮೆನಯಲ್ಲೇ ಅಗ್ನಿಕುಂಡ ನಿರ್ಮಿಸಿ ಹೋಮ ನೆರವೇರಿಸಿದ್ದಾರೆ. ನಂತರ ಬೆಂಗಳೂರಿಗೆ ತೆರಳಿದ್ದಾರೆ.
 
ಈ ಪ್ರಕರಣಕ್ಕೆ ಸಂಬಂಧಿಸಿ ಸಂಸತ್ರಸ್ತ ಮಹಿಳೆ ಹೆಚ್‌.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯದ ಆರೋಪ ಮಾಡಿದ್ದು. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆಯೇ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.
ಈ ಹಿನ್ನೆಲೆ ಹಾಸನದ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಜ್ವಲ್‌ ಮತ್ತು ಹೆಚ್‌ಡಿ ರೇವಣ್ಣ ಇಬ್ಬರ ವಿರುದ್ಧವೂ ದೂರು ದಾಖಲಾಗಿದೆ. ದೂರಿನ ಆಧಾರದಲ್ಲಿ ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿದೆ. 2015 ರಲ್ಲಿ ಹೆಚ್.ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದಾರೆ. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

RELATED ARTICLES

Related Articles

TRENDING ARTICLES