Monday, October 7, 2024

ಸತ್ಯ ಆದಷ್ಟು ಬೇಗ ಹೊರಬರಲಿದೆ : ಪ್ರಜ್ವಲ್ ರೇವಣ್ಣ ಟ್ವೀಟ್

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಸ್ವತಃ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ನಾನು ಬೆಂಗಳೂರಿನಲ್ಲಿ ಇಲ್ಲ, ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಹೇಳಿದ್ದಾರೆ.

ಪ್ರಜ್ವಲ್ ಲೈಂಗಿಕ ಪ್ರಕರಣದ ಕುರಿತು ಎಸ್​ಐಟಿ ತನಿಖೆ ಚುರುಕುಗೊಳಿಸಿದ್ದು, ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ, ಪ್ರಜ್ವಲ್ ಪರ ವಕೀಲರು, ನಮ್ಮ ಕಕ್ಷಿದಾರರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಏಳು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.

ಈ ಬೆನ್ನಲ್ಲೇ ಪ್ರಜ್ವಲ್ ಪೋಸ್ಟ್ ಮಾಡಿದ್ದು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಸಿಐಡಿ (CID) ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಕಲಂ 41 (ಎ) ಸಿ.ಆರ್.ಪಿ.ಸಿ ಅಡಿಯಲ್ಲಿ ಎಸ್​ಐಟಿ ನೀಡಿದ್ದ ನೋಟಿಸ್​ಗೆ ವಕೀಲರ ಮೂಲಕ ಎಸ್​ಐಟಿ ಮುಖ್ಯಸ್ಥರಿಗೆ ಪ್ರಜ್ವಲ್ ಪತ್ರ ಬರೆದಿದ್ದಾರೆ. ಎಸ್ಐಟಿ ಮುಂದೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೊಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ. ಅರುಣ್ ಮನವಿ ಮಾಡಿದ್ದಾರೆ.

7 ದಿನಗಳ ಕಾಲ ಕಾಲಾವಕಾಶ ಬೇಕಾಗಿದೆ

ಪ್ರಜ್ವಲ್ ರೇವಣ್ಣ ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದಾರೆ. ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಲಾಗಿದೆ. ನನ್ನ ಕಕ್ಷಿದಾರರು ಬೆಂಗಳೂರಿಗೆ ಬಂದು ತಮ್ಮ ಮುಂದೆ ಹಾಜರಾಗಲಿದ್ದಾರೆ. ಹಾಜರಾಗಲು 7 ದಿನಗಳ ಕಾಲ ಕಾಲಾವಕಾಶ ಬೇಕಾಗಿದೆ. ನನ್ನ ಕಕ್ಷಿದಾರರಿಗೆ 7 ದಿನಗಳ ಕಾಲಾವಕಾಶ ಕೊಡಿ. ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

RELATED ARTICLES

Related Articles

TRENDING ARTICLES