Tuesday, May 21, 2024

ರೇವಣ್ಣ, ಪ್ರಜ್ವಲ್​ಗೆ SIT ನೋಟೀಸ್​: ಪ್ರಕರಣಕ್ಕೆ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಎಂಟ್ರಿ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್​ ಪ್ರಕರಣ ದೇಶದಾದ್ಯಂತ ಭಾರಿ ಸದ್ದು ಮಾಡಿದ್ದು ಪ್ರಕರಣವನ್ನು ಎಸ್ಐಟಿ ತಂಡ ತನಿಖೆ ಆರಂಭಿಸಿ ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣಗೆ ನೋಟಿಸ್​ ನೀಡಿದೆ.

ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ ಕಾನೂನು ಕ್ರಮದ ಎಚ್ಚರಿಕೆಯನ್ನು ಎಸ್​ಐಟಿ  ಉಲ್ಲೇಖ ಮಾಡಿದೆ. ಈ ಹಿನ್ನೆಲೆಯಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ವಿಚಾರಣೆಗೆ ಹಾಜರಾಗ್ತಾರಾ ಎಂಬ ಕುತೂಹಲ ಮೂಡಿದೆ. ಈಗಾಗಲೇ ಪ್ರಜ್ವಲ್ ಜರ್ಮನಿಯಲ್ಲಿದ್ದಾರೆ. ಇತ್ತ ರೇವಣ್ಣ ಕೂಡ ವಿಚಾರಣೆಗೆ ಗೈರಾಗುವ ಸಾಧ್ಯತೆಗಳೆವೆ ಎಂದು ಮೂಲಗಳು ತಿಳಿಸಿದೆ.

ಈ ನಡುವೆ ಪ್ರಕರಣಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಂಟ್ರಿ ಕೊಟ್ಟಿದೆ. ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ಮುಖ್ಯಸ್ಥ ಬಿಜಯ್ ಕುಮಾರ್ ಸಿಂಗ್‌ಗೆ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ, ಸಂತ್ರಸ್ತೆ ಒಬ್ಬರು ತನ್ನ ಮಗಳ ಜೊತೆ ಕೂಡ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ. ಪ್ರಕರಣದಲ್ಲಿ ಆರೋಪಿ ಅಪ್ರಾಪ್ತ ಹೆಣ್ಣು ಮಕ್ಕಳನ್ನ ಬಳಸಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಅನುಮಾನ ಇದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯಿಂದ ಅಪ್ರಾಪ್ತ ಹೆಣ್ಣು ಮಕ್ಕಳ ಬಳಕೆ ಪತ್ತೆಯಾದಲ್ಲಿ ಈ ಬಗ್ಗೆ ವರದಿ ನೀಡುವಂತೆ ಎಸ್‌ಐಟಿಗೆ ಪತ್ರ ಬರೆದಿದ್ದಾರೆ.

RELATED ARTICLES

Related Articles

TRENDING ARTICLES