Friday, May 17, 2024

‘ಅರ್ಜುನ’ನ ಸಮಾಧಿಗೆ ಯಾರು ದಿಕ್ಕು ದೆಸೆ ಇಲ್ಲ : ಅರ್ಜುನನ ಆಸರೆಗೆ ‘ಡಿ’ ಬಾಸ್ ಮನವಿ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ಸಮಾಧಿಗೆ ಯಾರು ದಿಕ್ಕು ದೆಸೆ ಇಲ್ಲದಂತೆ ಭಾಸವಾಗುತ್ತಿದೆ ಎಂದು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಾಣಿ ಪ್ರಿಯ ‘ಡಿ’ ಬಾಸ್, ಮಳೆಗಾಲ ಶುರುವಾಗುವ ಮುನ್ನ ಅರ್ಜುನನ ಸಮಾಧಿಗೆ ಒಳ್ಳೆ ವ್ಯವಸ್ಥೆಯಾಗಲಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜೊತೆಗೆ ಅರ್ಜುನನ ಜೊತೆಗಿನ ತಮ್ಮ ಫೋಟೋವನ್ನು ಹಂಚಿಕೊಂಡಿದ್ದಾರೆ.

ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ನಟ ದರ್ಶನ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅರ್ಜುನನ ಆಸರೆಗೆ ‘ಡಿ’ ಬಾಸ್ ಧ್ವನಿ ಎತ್ತಿದ್ದಾರೆ.

‘ಗಜ’ ಗಾಂಭೀರ್ಯಕ್ಕೆ ಅರ್ಜುನನೇ ಸಾಟ

‘ಅರ್ಜುನ ಆನೆ ಸಾವಿಗೆ ದರ್ಶನ್ ಅವರು ಕಂಬನಿ ಮಿಡಿದಿದ್ದರು. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ ಅವರು, ‘8 ಬಾರಿ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ 64 ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜ ಗಾಂಭೀರ್ಯಕ್ಕೆ ಅವನೇ ಸಾಟಿ. ಓಂ ಶಾಂತಿ’ ಎಂದು ಬರೆದುಕೊಂಡಿದ್ದರು.

ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ… pic.twitter.com/xKScAy3mMW

RELATED ARTICLES

Related Articles

TRENDING ARTICLES