Friday, May 17, 2024

ವಿಧಾನ ಪರಿಷತ್​ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ : ಮತದಾನ ಯಾವಾಗ?

ಬೆಂಗಳೂರು : ರಾಜ್ಯ ವಿಧಾನ ಪರಿಷತ್​ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಮೂರು ಶಿಕ್ಷಕರ ಕ್ಷೇತ್ರಗಳು ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ.

ಲೋಕಸಭಾ ಚುನಾವಣೆ ನಡುವೆಯೇ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಇನ್ನು ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಮೇ 16 ಕೊ‌ನೆಯ ದಿನವಾಗಿದೆ. ಇನ್ನು ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ.

RELATED ARTICLES

Related Articles

TRENDING ARTICLES