Friday, May 17, 2024

ಕಾಮಕ್ರಿಮಿಗೆ ಮತ್ತೆ ಸಂಕಷ್ಟ : ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣರ ಕಾಮಲೀಲೆ ಪ್ರಕರಣದಲ್ಲಿ ‘ಕಾಮಕ್ರಿಮಿ’ ಪ್ರಜ್ವಲ್​​​ ರೇವಣ್ಣಗೆ ಸದ್ಯಕ್ಕೆ ರಿಲೀಫ್ ಇಲ್ಲದಂತಾಗಿದೆ.

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ತಂದೆ ಹಾಗೂ ಮಾಜಿ ಸಚಿವ ಹೆಚ್​.ಡಿ. ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆದಿದೆ. ಅರ್ಜಿ ವಿಚಾರಣೆಯ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ​, ಜಾಮೀನು ವಿಚಾರಣೆ ಅರ್ಜಿಯನ್ನು ನಾಳೆಗೆ ಮುಂದೂಡಿದಿದೆ.

ಮಾಜಿ ಸಚಿವ ಹೆಚ್​.ಡಿ. ರೇವಣ್ಣರ ಸೆಷನ್ಸ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನಲೆ ಇಂದು SITಗೆ ನೋಟಿಸ್ ನೀಡಿರುವ ನ್ಯಾಯಾಲಯ ನಾಳೆಗೆ ವಿಚಾರಣೆ ಮುಂದೂಡಿದೆ. ಇನ್ನು ಮಧ್ಯಂತರ ಜಾಮೀನು ನೀಡಲು ರೇವಣ್ಣ ಪರ ವಕೀಲರ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.

ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. FIRನಲ್ಲಿ ಇರುವ ಎಲ್ಲ ಆರೋಪಗಳಿಗೆ ಜಾಮೀನು ನೀಡಬಹುದು. ಆದ್ರೆ, ಮ್ಯಾಜಿಸ್ಟ್ರೇಟ್​ಗೆ ಅತ್ಯಾಚಾರ ಆರೋಪ ಸೇರಿಸಲು ಅರ್ಜಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ರೇವಣ್ಣ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ಚಾಮರಾಜನಗರದಲ್ಲಿ ಪ್ರತಿಭಟನೆ

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಚಾಮರಾಜನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಿದ್ದಾರೆ. ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣನಿಗೆ ತಕ್ಕ ಶಿಕ್ಷೆಯಾಗಬೇಕು ಹಾಗೂ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES