Friday, May 17, 2024

9ನೇ ಗೆಲುವಿನ ನಿರೀಕ್ಷೆಯಲ್ಲಿ ರಾಜಸ್ಥಾನ : ಬಲಿಷ್ಠ RR ವಿರುದ್ಧ SRH ಗೆಲ್ಲುತ್ತಾ? ಕಾಮೆಂಟ್ ಮಾಡಿ

ಬೆಂಗಳೂರು : ಐಪಿಎಲ್​ನಲ್ಲಿ ಇಂದು ರಾಜಸ್ಥಾನ್ ರಾಯಲ್ಸ್​ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ.

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ 50ನೇ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಇಂದಿನ ಪಂದ್ಯ ಗೆದ್ದರೆ ರಾಜಸ್ಥಾನ್ ರಾಯಲ್ಸ್​ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಐಪಿಎಲ್​ ಇತಿಹಾಸದಲ್ಲಿ ಉಭಯ ತಂಡಗಳು ಈವರೆಗೆ 18 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ರಾಜಸ್ಥಾನ್ ರಾಯಲ್ಸ್​ 9 ಪಂದ್ಯಗಳನ್ನು ಗೆದ್ದಿದ್ದರೆ, ಸನ್ ​ರೈಸರ್ಸ್ ಹೈದರಾಬಾದ್ ಕೂಡ 9 ಪಂದ್ಯಗಳನ್ನು ಗೆದ್ದಿದೆ. ಇಂದು ಗೆದ್ದವರು ಮೇಲುಗೈ ಸಾಧಿಸಲಿದ್ದಾರೆ.

ಪ್ರಸಕ್ತ ಟೂರ್ನಿಯಲ್ಲಿ ರಾಜಸ್ಥಾನ 9 ಪಂದ್ಯಗಳನ್ನು ಆಡಿದೆ. ಈ ಪೈಕಿ 8 ಪಂದ್ಯಗಳನ್ನು ಗೆದ್ದು, ಕೇವಲ ಒಂದು ಪಂದ್ಯದಲ್ಲಿ ಸೋಲು ಅನುಭವಿಸಿದೆ. ಹೈದರಾಬಾದ್ ಸಹ 9 ಪಂದ್ಯಗಳನ್ನು ಆಡಿದ್ದು 5 ಗೆಲುವು ಹಾಗೂ 4 ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ ಭರ್ಜರಿ ಫಾರ್ಮ್​ನಲ್ಲಿದೆ. ಇತ್ತ, ಹೈದರಾಬಾದ್ ಬ್ಯಾಕ್​ ಟು ಬ್ಯಾಕ್​ ಸೋಲಿನಿಂದ ಕಂಗೆಟ್ಟಿದೆ. ಇಂದಿನ ಪಂದ್ಯ ಗೆದ್ದು ಗೆಲುವಿನ ಲಯಕ್ಕೆ ಮರಳಲು ಸಜ್ಜಾಗಿದೆ.

ರಾಜಸ್ಥಾನ ಸಂಭವನೀಯ XI

ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ.), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಾಲ್

ಹೈದರಾಬಾದ್ ಸಂಭವನೀಯ XI

ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿ.ಕೀ.), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕತ್, ಟಿ. ನಟರಾಜನ್

RELATED ARTICLES

Related Articles

TRENDING ARTICLES