Thursday, September 19, 2024

ಬೆಂಗಳೂರಿನಲ್ಲಿ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ, ರಾಜ್ಯದಲ್ಲಿ ಮುಂದಿವರೆದ ಹೀಟ್​ ವೇವ್​

ಬೆಂಗಳೂರು: ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 6 ಹಾಗೂ 7 ರಂದು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ,‌ ಉಡುಪಿ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬಳ್ಳಾರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಉಷ್ಣ ಅಲೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ರಾಯ್​ಬರೇಲಿಯಿಂದ ರಾಹುಲ್​ ಗಾಂಧಿ ಕಣಕ್ಕೆ, ಅಮೇಥಿಯಿಂದ ಕೆಎಲ್​ ಶರ್ಮ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಮುಂದುವರೆದ ಹೀಟ್​ ವೇವ್​:

ರಾಜ್ಯದಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಜನರು ಮನೆಯಿಂದ ಹೊರಗಡೆ ಬರಲು ಎದುರು ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಇನ್ನು ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಮತ್ತೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ಮೇ 5ನೇ ತಾರೀಕಿನವರೆಗೂ 6 ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆಯ ಪರಿಸ್ಥಿತಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಳ್ಳಾರಿ, ಕಲಬುರಗಿ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ. ಮೇ 6ರನಂತರ ಹಾಸನ, ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯಾಗಲಿದೆ.ಇನ್ನು ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನ ಸಹ ಮಳೆಗಾಗಿ ಕಾಯ್ತಾ ಇದ್ದಾರೆ.

RELATED ARTICLES

Related Articles

TRENDING ARTICLES