Thursday, September 19, 2024

ಪ್ರೀತಿಸಿದ ಹುಡುಗಿ ಜೊತೆ ಯುವಕ ಪರಾರಿ: ಯುವನ ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ

ಹಾವೇರಿ: ಯುವಕನೋರ್ವ ಗ್ರಾಮದ ಯುವತಿಯೊಂದಿಗೆ ಪರಾರಿಯಾದ ಬೆನ್ನಲ್ಲೇ ಯುವತಿಯ ಪೋಷಕರು ಯುವಕನ ತಾಯಿಯನ್ನು ವಿದ್ಯುತ್​ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಹನಮವ್ವ ದುರಗಪ್ಪ ಮೆಡ್ಲೆರಿ (50) ಹಲ್ಲೆಗೊಳಗಾದ ಮಹಿಳೆ. ಅದೇ ಗ್ರಾಮದ ಚಂದ್ರಪ್ಪ, ಗಂಗಪ್ಪ, ಗುತ್ತೆವ್ವ ಹಲ್ಲೆ ಮಾಡಿದ ಆರೋಪಿಗಳು. ಹನುಮವ್ವನ ಮಗ ಮಂಜುನಾಥ ಯುವತಿಯನ್ನು ಕರೆದುಕೊಂಡು ಹೋಗಿರುವ ಆರೋಪವಿದೆ. ಆತ ಯುವತಿಯನ್ನು ಬಲವಂತವಾಗಿ ಅಪಹರಿಸಿದ್ದಲ್ಲದೆ ಆಭರಣಗಳನ್ನೂ ದೋಚಿದ್ದಾನೆ ಎಂದು ಇವರು ದೂರಿದ್ದಾರೆ.

 

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣನಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ಥ ತಾಯಿ ಕಣ್ಮರೆ, ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ದಾಖಲಿಸಿದ ಮಗ

ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿ “ನಿನ್ನ ಮಗ ಎಲ್ಲಿದ್ದಾನೆ ಹೇಳು” ಎಂದು ಪೀಡಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಹಲ್ಲೆ ನಡೆಸಿದರು. ಗಾಯಗೊಂಡ ಹನಮವ್ವಳಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರಾಣೇಬೆನ್ನೂರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES