Saturday, May 18, 2024

ರೇವಣ್ಣ ಬಂಧನ : ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ

ಚಿಕ್ಕೋಡಿ : ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಬಂಧನ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಈ ಪ್ರಕರಣದಲ್ಲಿ ಇಂಟರ್​ಫಿಯರ್ ಆಗೋದಿಲ್ಲ. ಏಕೆಂದರೆ, ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ ಆಗಿದೆ. ಹೀಗಾಗಿ, ಎಸ್​ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ನಿಸ್ಪಕ್ಷಪಾತವಾದ ತನಿಖೆ ನಡೆಯಬೇಕು ಎಂದು ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂಬ ಸಿ.ಎಸ್. ಪುಟ್ಟರಾಜು ಹೇಳಿಕೆ ವಿಚಾರವಾಗಿ ಮಾತನಾಡಿ, ಅವರೇನೂ ಲಾಯರಾ? ಅವರು ಲಾಯರಾ? ಪೊಲೀಸರ ಜೊತೆ ಮಾತನಾಡಿ ಮತ್ತೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಕಿಡ್ನಾಪ್ ಆದ ಮಹಿಳೆ ಪತ್ತೆಯಾಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಪೊಲೀಸರ ಜೊತೆ ಮಾತನಾಡುತ್ತೇನೆ ಎಂದು ಸಿದ್ದರಾಂಯ್ಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES