Saturday, May 18, 2024

ರೇವಣ್ಣ ಬಂಧನ : ಡಿ.ಕೆ. ಶಿವಕುಮಾರ್ ಫಸ್ಟ್ ರಿಯಾಕ್ಷನ್

ಗದಗ : ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರನ್ನು ಬಂಧಿಸಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾಜಿ ಸಿಎಂ ಹೆಚ್​.ಡಿ. ಕುಮಾರಣ್ಣ ಪ್ರಾರಂಭದಲ್ಲಿ ಏನು ಹೇಳಿದ್ದಾರೆ ಅದೆ ಪಕ್ಕಾ, ಅದಕ್ಕೆ ಬದ್ಧ ಎಂದು ಹೇಳಿದ್ದಾರೆ.

ನೋಡಿ ನ್ಯಾಯಾಲಯ ಉಂಟು, ಕೋರ್ಟ್‌ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ ಭಾಗಿ ಆಗೋದಿಲ್ಲ. ನಮಗೆ ಅವಶ್ಯಕತೆ ಇಲ್ಲ. ಅವರು ಕೋರ್ಟ್, ಕಾನೂನಿನಲ್ಲಿ ಏನು ರಕ್ಷಣೆ ಬೇಕು ಪಡೆದುಕೊಳ್ಳಲಿ. ಅವರು ಏನಾದರೂ ಮಾಡಿಕೊಳ್ಳಲಿ ಕಾನೂನು ಇದೆ ಎಂದು ತಿಳಿಸಿದ್ದಾರೆ.

ಮಹಿಳೆಯರ ರಕ್ಷಣೆಗೆ ಬದ್ಧ

ರೇವಣ್ಣ ಬಂಧನ ಬೆನ್ನಲ್ಲೇ ಕಾಂಗ್ರೆಸ್​ ಪ್ರತಿಕ್ರಿಯಿಸಿದೆ. ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರದ ಬದ್ಧತೆ ಆಚಲವಾಗಿರುತ್ತದೆ. ಮಹಿಳೆಯರ ಮಾನ, ಪ್ರಾಣ, ಘನತೆ ಎತ್ತಿ ಹಿಡಿಯುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ನಮ್ಮ ಕಾಂಗ್ರೆಸ್​ ಸರ್ಕಾರ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಹೆಚ್.ಡಿ. ರೇವಣ್ಣರನ್ನು ಬಂಧಿಸಿದ SIT ತಂಡ ಮಹಿಳಾ ಪೀಡನೆಯ ವಿಕೃತ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ ಎಂದು ಹೇಳಿದೆ.

RELATED ARTICLES

Related Articles

TRENDING ARTICLES