Saturday, May 18, 2024

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ FIR ದಾಖಲು

ಹೈದರಾಬಾದ್​: ಗೃಹ ಸಚಿವ ಅಮಿತ್ ಶಾ ವಿರುದ್ಧ FIR ದಾಖಲಾಗಿದೆ. ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತರನ್ನು ಬಳಸಿಕೊಂಡ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

ಮೇ 1 ರಂದು ಲಾಲ್ ದರ್ವಾಜದಿಂದ ಸುಧಾ ಟಾಕೀಸ್‌ವರೆಗೆ ನಡೆದ ಬಿಜೆಪಿಯ ಚುನಾವಣಾ ರ್ಯಾಲಿಯಲ್ಲಿ ಕೆಲವು ಅಪ್ರಾಪ್ತರು ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು ಎಂದು ತೆಲಂಗಾಣ ಮುಖ್ಯ ಚುನಾವಣಾಧಿಕಾರಿಗೆ ನೀಡಿದ ದೂರಿನಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ನಿರಂಜನ್ ರೆಡ್ಡಿ ಆರೋಪಿಸಿದ್ದರು. ಮಗುವಿನ ಕೈಯಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಇದ್ದಿರುವುದು ಗಮನಕ್ಕೆ ಬಂದಿದೆ. ಇದು ಚುನಾವಣಾ ಆಯೋಗದ ಮಾರ್ಗಸೂಚಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂದೂ ರೆಡ್ಡಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಯುವಕ: ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ದೂರಿನ ಆಧಾರದ ಮೇಲೆ ವಾಸ್ತವತೆಯನ್ನು ಪರಿಶೀಲಿಸುವಂತೆ ಚುನಾವಣಾ ಆಯೋಗದ ಅಧಿಕಾರಿಗಳು ನಗರ ಪೊಲೀಸರಿಗೆ ಪ್ರಕರಣವನ್ನು ರವಾಸಿದ್ದರು. ಮೊಘಲ್‌ಪುರ ಪೊಲೀಸ್ ಠಾಣೆಯಲ್ಲಿ ಅಮಿತ್ ಶಾ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

RELATED ARTICLES

Related Articles

TRENDING ARTICLES