Saturday, May 18, 2024

ಹೆಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಯಾವುದೇ ಕ್ಷಣದಲ್ಲಿ ರೇವಣ್ಣ ಬಂಧನ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್​.ಡಿ. ರೇವಣ್ಣಗೆ ನ್ಯಾಯಾಲಯ ಬಿಗ್ ಶಾಕ್ ನೀಡಿದೆ.

ಹೆಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಮೇ 6 ತಾರೀಖಿಗೆ ಮುಂದಿನ ವಿಚಾರಣೆ ಮುಂದೂಡಲಾಗಿದೆ. ಯಾವುದೇ ಕ್ಷಣದಲ್ಲಿ ರೇವಣ್ಣ ಬಂಧನ ಸಾಧ್ಯತೆಯಿದೆ.

ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಅಪಹರಣ ಪ್ರಕರಣ ಸಂಬಂಧ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.

ಸುಮಾರು 2 ಗಂಟೆಗಳ ವಿಚಾರಣೆ ನಡೆಸಿದ ಕೋರ್ಟ್‌ ಕೆಲ ಕಾಲ ತೀರ್ಪು ಕಾಯ್ದಿರಿಸಿತು. ಬಳಿಕ ಸಂಜೆ 6.25ರ ಸುಮಾರಿಗೆ ಆದೇಶ ಪ್ರಕಟಿಸಿತು. ಜೊತೆಗೆ ಮೇ6 ಕ್ಕೆ ವಿಚಾರಣೆ ಮುಂದೂಡಿದೆ. ಈ ಮೂಲಕ ರೇವಣ್ಣ ಅವರಿಗೆ ರಿಲೀಫ್‌ ಸಿಕ್ಕಿಲ್ಲ.

ಸುದ್ದಿ ಓದಿದ್ದೀರಾ? : ವಿಡಿಯೋ ನಾನು ನೋಡಿಲ್ಲ, ಕನಿಷ್ಠ ವೀಡಿಯೋ ಬ್ಲರ್ ಕೂಡ ಆಗಿಲ್ಲ : ನಿಖಿಲ್ ಕುಮಾರಸ್ವಾಮಿ

ರೇವಣ್ಣ ಪರ ವಕೀಲರ ವಾದವೇನು?

ಆರೋಪಿ ಮುಗ್ಧ ಎಂದು ಸಾಬೀತುಮಾಡಲು ಅವಕಾಶ ನೀಡಬೇಕು. ಈ ಕಾರಣಕ್ಕಾಗಿಯೇ ಹೆಚ್.ಡಿ. ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಬೇಕು. ನ್ಯಾಯಾಧೀಶರೂ ಪೂರ್ವಾಗ್ರಹವಿಲ್ಲದೇ ನಿರೀಕ್ಷಣಾ ಜಾಮೀನು ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಮೂರ್ತಿ ಡಿ. ನಾಯ್ಕ್ ವಾದ ಮಂಡಿಸಿದರು.

RELATED ARTICLES

Related Articles

TRENDING ARTICLES