Saturday, May 18, 2024

ಹೆಚ್.ಡಿ. ರೇವಣ್ಣ ಬಂಧನ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ‌ಬಂಧಿಸಿದ್ದಾರೆ.

ಈ ಕುರಿತು ಕಾಂಗ್ರೆಸ್​ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರದ ಬದ್ಧತೆ ಆಚಲವಾಗಿರುತ್ತದೆ ಎಂದು ತಿಳಿಸಿದೆ.

ಮಹಿಳೆಯರ ಮಾನ, ಪ್ರಾಣ, ಘನತೆ ಎತ್ತಿ ಹಿಡಿಯುವಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ನಮ್ಮ ಕಾಂಗ್ರೆಸ್​ ಸರ್ಕಾರ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಹೆಚ್.ಡಿ. ರೇವಣ್ಣರನ್ನು ಬಂಧಿಸಿದ SIT ತಂಡ ಮಹಿಳಾ ಪೀಡನೆಯ ವಿಕೃತ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ ಎಂದು ಹೇಳಿದೆ.

ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಜಾಮೀನು ಅರ್ಜಿ ವಜಾಗೊಂಡ ಹಿನ್ನಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರ ಮನೆ ಬಳಿ ಹೋಗಿದ್ದರು. ಈ ವೇಳೆ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಇದೀಗ, ರೇವಣ್ಣ ಅವರನ್ನು SIT ಕಚೇರಿಗೆ ಕರೆದುಕೊಂಡು ಹೋಗಿದ್ದು, ವಿಚಾರಣೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES