Saturday, May 18, 2024

ಹಾಸನ ಸಂಸದರಿಗೂ ನನಗೂ ಸಂಪರ್ಕ ಇರಲಿಲ್ಲ : ಪ್ರಜ್ವಲ್​ ಬಗ್ಗೆ ನಿಖಿಲ್ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಸಹೋದರ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಸನ ಸಂಸದರಿಗೂ ನನಗೂ ಸಂಪರ್ಕ ಇರಲಿಲ್ಲ ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಈಗಾಗಲೇ SIT ರಚನೆ ಮಾಡಿದೆ. ಅಧಿಕಾರಿಗಳಿಂದ ತನಿಖೆ ನಡೀತಾ ಇದೆ. ಕಾನೂನಿಗಿಂತ ಯಾರು ದೊಡ್ಡವರಲ್ಲ. ಅದು ಒಂದು ಪ್ರಕ್ರಿಯೆ, ಅದರ ಬಗ್ಗೆ ನಾನು ಮಾತನಾಡೋಕ್ಕೆ ಹೋಗಲ್ಲ ಎಂದು ತಿಳಿಸಿದ್ದಾರೆ.

ಪ್ರಕರಣ ಮುಂದಿಟ್ಟುಕೊಂಡು ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನ ರಾಜಕೀಯವಾಗಿ ಮುಗಿಸಬೇಕೆಂಬ ವಿಚಾರವಾಗಿ ಮಾತನಾಡಿ, ಈ ವಿಷಯಕ್ಕೆ ಸಂಬಂಧಿಸಿದಂತೆ ದೇವೇಗೌಡರನ್ನ ಹಾಗೂ ಕುಮಾರಸ್ವಾಮಿ ಅವರನ್ನ ತರೋದು ಸರಿಯಲ್ಲ. ಯಾರು ಆರೋಪಿ ಇದ್ದಾರೆ, ಯಾರು ತಪ್ಪು ಮಾಡಿದ್ದಾರೆ, ಅವರಿಗೆ ಖಂಡಿತ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

ನಾನು ಹೆಚ್ಚಿಗೆ ಹಾಸನಕ್ಕೆ ಕಾಲೇ ಇಟ್ಟಿಲ್ಲ

ಪ್ರಧಾನಿ ಮೋದಿಯವರು ಮಧ್ಯ ಪ್ರವೇಶ ಮಾಡಬೇಕೆಂಬ ಕಾಂಗ್ರೆಸ್ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇಶದ ಪ್ರಧಾನಿ ಅವರನ್ನ ಈ ವಿಚಾರಕ್ಕೆ ಕರೆತರೋದು ಒಳ್ಳೆಯದಲ್ಲ. ಅದು ಸೂಕ್ತನೂ ಅಲ್ಲ. ಅಲ್ಲದೇ ಹಾಸನ ವಿಚಾರ ಆಗಲಿ, ನನಗೆ ಅದಕ್ಕೂ ಸಂಬಂಧ ಇಲ್ಲ. ನಾನು ಹೆಚ್ಚಿಗೆ ಹಾಸನಕ್ಕೆ ಕಾಲೇ ಇಟ್ಟಿಲ್ಲ. ಹೋದರೆ ಹಾಸನಾಂಬೆ ಉತ್ಸವಕ್ಕೆ ಮಾತ್ರ ಹೋಗ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES