Saturday, May 18, 2024

ಇಂದು ಸೋತರೆ RCB ನೇರ ಮನೆಗೆ : ತವರು ಅಂಗಳದಲ್ಲಿ RCB ಗೆಲ್ಲುತ್ತಾ? ಕಾಮೆಂಟ್ ಮಾಡಿ

ಬೆಂಗಳೂರು : ಸತತ ಸೋಲುಗಳಿಂದ ಕಂಗೆಟ್ಟು ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿರುವ ಆರ್​ಸಿಬಿ ತಂಡ ಇಂದು ಗುಜರಾತ್ ವಿರುದ್ಧ ಸೆಣಸಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಐಪಿಎಲ್​ನ 52 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯ ಎರಡೂ ತಂಡಗಳಿಗೂ ‘ಮಾಡು ಇಲ್ಲವೆ ಮಡಿ’ಯಾಗಿದೆ.

ಸದ್ಯ ಆರ್​ಸಿಬಿ 10 ಪಂದ್ಯಗಳನ್ನು ಆಡಿದೆ. ಈ ಪೈಕಿ 3 ಪಂದ್ಯ ಗೆದ್ದು, 7 ಪಂದ್ಯಗಳಲ್ಲಿ ಸೋಲು ಕಂಡಿದೆ. ಗುಜರಾತ್ ಟೈಟಾನ್ಸ್​ 10 ಪಂದ್ಯಗಳನ್ನು ಆಡಿದೆ. ಇದರಲ್ಲಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 6 ಪಂದ್ಯಗಳನ್ನು ಕೈಚೆಲ್ಲಿದೆ. ಗುಜರಾತ್ 8 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಆರ್​ಸಿಬಿ ಕೊನೆಯ ಸ್ಥಾನದಲ್ಲಿದೆ.

ಇಂದು ಸೋತರ ನೇರ ಮನೆಗೆ

ತವರು ಅಂಗಳದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಸೋತರ ನೇರ ಮನೆಗೆ ಸೇರಲಿದೆ. ಗೆದ್ದರೆ ಆರ್​ಸಿಬಿ ಪ್ಲೇಆಫ್​ ಕನಸು ಜೀವಂತವಾಗಿರಲಿದೆ. ಆದರೂ, ಇತರ ತಂಡಗಳ ಗೆಲುವಿನ ಮೇಲೆ ಬೆಂಗಳೂರು ಭವಿಷ್ಯ ನಿರ್ಧಾರವಾಗಲಿದೆ. ವಿರಾಟ್ ಕೊಹ್ಲಿ ಜೊತೆ ವಿಲ್ ಜಾಕ್ಸ್​ ಕೂಡ ಅದ್ಭುತ ಫಾರ್ಮ್​ಗೆ ಮರಳಿದ್ದು ತಂಡದ ಆತ್ಮ ವಿಶ್ವಾಸ ಹೆಚ್ಚಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿ.ಕೀ.), ಸ್ವಪ್ನಿಲ್ ಸಿಂಗ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್

ಗುಜರಾತ್ ಟೈಟಾನ್ಸ್

ವೃದ್ಧಿಮಾನ್ ಸಹಾ (ವಿ.ಕೀ.), ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ

RELATED ARTICLES

Related Articles

TRENDING ARTICLES