Saturday, May 18, 2024

ಇಂದಿನಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆ!

ಬೆಂಗಳೂರು: ದೇಶಾದ್ಯಂತ ಹವಾಮಾನ ವೈಪರೀತ್ಯದಿಂದಾಗಿ ಬಿಸಿ ಶಾಖದ ಅನುಭವವಾಗುತ್ತಿದೆ. ಕೆಲ ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ ಸಿಕ್ಕಿದೆ. ಇನ್ನು ಕೆಲ ರಾಜ್ಯಗಳಲ್ಲಿ ಬಿಸಿಲಿನ ತಾಪದಿಂದ ಮುಕ್ತಿ ಪಡೆಯುವ ಸಾಧ್ಯತೆಯಿಲ್ಲವಾದರೂ ಬೆಂಗಳೂರಿನಲ್ಲಿ 5 ತಿಂಗಳ ನಂತರ ನಿನ್ನೆ ಭಾರೀ ಮಳೆ ಸುರಿದಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ ಮೇ 19ರವರೆಗೆ ಎರಡು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯು ನೀಡಿರುವ ವರದಿಯ ಪ್ರಕಾರ, ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ ಮೇ 19ರವರೆಗೆ ಎರಡು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ FIR ದಾಖಲು

ತಾಪಮಾನ ಸರಾಸರಿಗಿಂತ ಹೆಚ್ಚಾದ ತಕ್ಷಣ ಮಳೆಯಾಗುತ್ತದೆ, ಆದರೆ ಈ ಬಾರಿ ಪರಿಸ್ಥಿತಿ ಬದಲಾಗಿದೆ. 23 ನವೆಂಬರ್ 2023 ರ ನಂತರ ಬೆಂಗಳೂರಿನಲ್ಲಿ ಮಳೆಯೇ ಆಗಿಲ್ಲ. ಇದೇ ಮೊದಲ ಬಾರಿಗೆ ನಿನ್ನೆ ಮೊನ್ನೆ ಬೆಂಗಳೂರಿನಲ್ಲಿ ಮಳೆಯಾಗಿದೆ. ಆದರೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಿಂಗಳುಗಟ್ಟಲೆ ಮಳೆಯೇ ಇಲ್ಲದೆ ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ಬೆಂಗಳೂರಿನ ಹವಾಮಾನವು ಸದ್ಯ ಸಾಕಷ್ಟು ಆಹ್ಲಾದಕರವಾಗಿದೆ. ಅತ್ತ ಅರುಣಾಚಲ ಪ್ರದೇಶದ ಜೊತೆಗೆ ಅತ್ತ ಮಿಜೋರಾಂನಲ್ಲಿಯೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

RELATED ARTICLES

Related Articles

TRENDING ARTICLES