Saturday, May 18, 2024

ಪ್ರಜ್ವಲ್​ ರೇವಣ್ಣ ಪ್ರಕರಣದಲ್ಲಿ ಯಾರೇ ಆರೋಪಿಗಳಿದ್ದರು ಕಠಿಣ ಕ್ರಮ ಕೈಗೊಳ್ಳಿ: ಸಿಎಂಗೆ ರಾಹುಲ್ ಪತ್ರ

ದೆಹಲಿ: ಹಾಸನ ಸಂಸದ ಪ್ರಜ್ವಲ್​​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರಿಗೆ ಪತ್ರ ಬರೆದಿದ್ದಾರೆ.

ಈ ಪ್ರಕರಣದಲ್ಲಿ ಯಾರೇ ಆರೋಪಿಗಳಿದ್ದರೂ ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ: ರೇವಣ್ಣ ನಿವಾಸದಲ್ಲಿ SITಯಿಂದ ಸಂತ್ರಸ್ತೆಯೊಂದಿಗೆ ಸ್ಥಳ ಮಹಜರು

ರಾಹುಲ್​​ ಗಾಂಧಿ ಬರೆದಿರುವ ಪತ್ರದಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್​​ ಶಾ ಅವರ ಬಗ್ಗೆಯೂ ಕಿಡಿಕಾರಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್​​ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ನೀಡಿದ್ದರು, ಅವರಿಗೆ ಟಿಕೆಟ್​​​ ನೀಡಿರುವುದು ಆಘಾತದ ವಿಷಯವಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್ ನನಗೆ ಎಂದು ಹೇಳಿದ್ದಾರೆ.

ಪ್ರಜ್ವಲ್​​​ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES