Saturday, May 18, 2024

UNICEF ಇಂಡಿಯಾದ ರಾಯಭಾರಿಯಾಗಿ ನಟಿ ಕರೀನಾ ಕಪೂರ್​ ಆಯ್ಕೆ!

ಬೆಂಗಳೂರು: (UNICEF) ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ನೇಮಕಗೊಂಡಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾಗಿ ಟಿಪ್ಪಣಿಯನ್ನು ಬರೆದುಕೊಂಡಿದ್ದಾರೆ.

ತಮಗೆ ಸಿಕ್ಕಿರು ಈ ಗೌರವದ ಕುರಿತು ನಟಿ ಕರೀನಾ ಕಪೂರ್​ ಭಾವುಕರಾಗಿದ್ದು, ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ. ʻʻನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ.

ಇದನ್ನೂ ಓದಿ: ಸಿಖ್​ ಪವಿತ್ರ ಗ್ರಂಥದ ಕೆಲ ಪುಟಗಳನ್ನ ಹರಿದ ಯುವಕ: ಥಳಿಸಿ ಕೊಲೆ

ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯಿಲ್ಲದೆ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳುʼʼಎಂದು ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES