Saturday, May 18, 2024

ಬಿಜೆಪಿ ಸೋತಾಗಿದೆ, ಮೋದಿ ಮತ್ತೆ ಪ್ರಧಾನಿಯಾಗಲ್ಲ : ಸಿದ್ದರಾಮಯ್ಯ ಭವಿಷ್ಯ

ದಾವಣಗೆರೆ : ಈಗಾಗಲೇ ಬಿಜೆಪಿ ಸೋತಾಗಿದೆ, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು.

ದಾವಣಗೆರೆಯಲ್ಲಿ ನಡೆದ ಪ್ರಜಾಧ್ವನಿ ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಶೇ.7 ರಷ್ಟು ಇರುವ ಕುರುಬ ಸಮುದಾಯಕ್ಕೆ ಬಿಜೆಪಿ ಒಂದೂ ಟಿಕೆಟ್ ಕೊಟ್ಟಿಲ್ವಲ್ಲಾ? ನಿಮಗೆ ಸಿಟ್ಟು ಬರಲ್ವಾ? ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿದ್ದಾರೆ. ಮೋದಿ ಅವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲ್ ಹಾಕಿದರು.

ನಮ್ಮ ಭಾಗ್ಯಗಳ ಪಟ್ಟಿ ಜನರ ಬಳಿ ಕೇಳಿ

ಎರಡು ಬಾರಿ ಮುಖ್ಯಮಂತ್ರಿಯಾಗಿ ನಾವು ರಾಜ್ಯದಲ್ಲಿ ಜಾರಿಮಾಡಿದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು, ಭಾಗ್ಯಗಳ ಪಟ್ಟಿ ನಾಡಿನ ಜನರ ಬಳಿ ಕೇಳಿ ಅವರೇ ಕೊಡುತ್ತಾರೆ. ನೀವು ಪ್ರಧಾನಿಯಾಗಿ ಮಾಡಿದ ಸಾಧನೆಗಳನ್ನು ತಾಕತ್ತಿದ್ದರೆ ಭಾರತೀಯರ ಮುಂದೆ ಹೇಳಿ ನೋಡೋಣ ಎಂದು ವಾಗ್ದಾಳಿ ನಡೆಸಿದರು.

ಮೋದಿ ಸಾಧನೆಗಳ ಪಟ್ಟಿ ಹಾಕಬೇಕು

ಮೋದಿಯವರ ಸಾಧನೆಗಳ ಪಟ್ಟಿ ಹಾಕಬೇಕು ಎಂದರೆ ಅವರು ಹೇಳಿದ ಸುಳ್ಳುಗಳ ಪಟ್ಟಿ ಮಾಡಬಹುದು. ಭಾರತೀಯರಿಗೆ ಹಾಕಿದ ಮೂರು ನಾಮಗಳ ಪಟ್ಟಿ ಮಾಡಬಹುದು. ಕನ್ನಡಿಗರ ಕೈಗೆ ಕೊಟ್ಟ ಚೊಂಬಿನ ಪಟ್ಟಿ ಮಾಡಬಹುದು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಟಿ ಬೀಸಿದರು.

RELATED ARTICLES

Related Articles

TRENDING ARTICLES