Saturday, May 18, 2024

ಹಾಸನ ಸಂಸದರ 2,976 ವಿಡಿಯೋಗಳಲ್ಲಿ ಒಂದನ್ನು ನಾನು ನೋಡಿದೆ : ನಟಿ ಹರ್ಷಿಕಾ ಬೇಸರ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಸಗಿರುವ ಪೈಶಾಚಿಕ ಕೃತ್ಯದ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ವೈರಲ್ ಆಗಿರುವ ಹಾಸನ ಸಂಸದರ 2,976 ವಿಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ. ದುರದೃಷ್ಟವಶಾತ್ ಅದನ್ನು ನೋಡುವುದು ನಿಜಕ್ಕೂ ನೋವಿನ ಸಂಗತಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

ವೈರಲ್ ಆಗಿರುವ ವಿಡಿಯೋಗಳು ನೈಜವಾಗಿದ್ದರೆ, ಅಂತಹ ಕೊಳಕು ಕೃತ್ಯಗಳನ್ನು ಸೃಷ್ಟಿಸಿದವರು ಖಂಡಿತವಾಗಿಯೂ ದೇಶದ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಯಾಗಬೇಕು. ಈ ವಿಡಿಯೋಗಳನ್ನು ಸಾರ್ವಜನಿಕರಿಗೆ ಹರಡಲು ಕಾರಣರಾದ ವ್ಯಕ್ತಿಗಳಿಗೂ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಮಹಿಳೆಯರು ಸಭ್ಯ ಕುಟುಂಬದವರು

ವೀಡಿಯೊಗಳಲ್ಲಿ ಕಾಣಿಸಿಕೊಂಡಿರುವ ಸಂತ್ರಸ್ಥೆಯರ ಬಗ್ಗೆ ನನ್ನ ನೋವನ್ನು ವ್ಯಕ್ತಪಡಿಸುತ್ತಿದ್ದೇನೆ. ಅವರೆಲ್ಲರೂ ಸಭ್ಯ ಮತ್ತು ಸಾಮಾನ್ಯ ಕುಟುಂಬದವರು. ಈ ಪ್ರಕರಣವನ್ನು ಹಾಗೂ ಸಂತ್ರಸ್ಥೆಯರ ಮುಖಗಳನ್ನು ರಾಜಕೀಯ ಚರ್ಚೆಗೆ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಬೇಸರಿಸಿದ್ದಾರೆ.

ಮಹಿಳೆಯರ ಮುಖವನ್ನು ಬ್ಲರ್ ಮಾಡಿ

ಸಂತ್ರಸ್ಥೆಯರ ಮುಖವನ್ನು ಬ್ಲರ್ ಮಾಡಬಹುದಿತ್ತು. ಮುಂದೆ ಅವರು ಸಮಾಜವನ್ನು ಹೇಗೆ ಎದುರಿಸುತ್ತಾರೆ. ನಮ್ಮ ಜನ ಅವರನ್ನು ಯಾವ ದೃಷ್ಟಿಕೋನದಲ್ಲಿ ನೋಡಬಹುದು? ಅವರ ಕುಟುಂಬ ಮತ್ತು ಮಕ್ಕಳ ಬಗ್ಗೆ ಏನಾದರೂ ಯೋಚನೆ ಮಾಡಿದ್ದೀರಾ? ಅವರು ಈಗ ಅನುಭವಿಸುತ್ತಿರುವ ಮಾನಸಿಕ ಆಘಾತವನ್ನು ಒಮ್ಮೆ ಯೋಚಿಸಿ ಎಂದು ಹೇಳಿದ್ದಾರೆ.

ಸಂತ್ರಸ್ಥೆಯರ ಕುಟುಂಬಕ್ಕೆ ಶಕ್ತಿ ನೀಡಲಿ

ನಾನು ಯಾವಾಗಲೂ ಮಹಿಳೆಯರ ಸಮಾನತೆಗಾಗಿ ನಿಂತಿದ್ದೇನೆ. ನಾನು ಯಾವಾಗಲೂ ಇದನ್ನು ಮಾಡುತ್ತೇನೆ. ಪ್ರಕರಣದಿಂದ ಸಮಸ್ಯೆಗೊಳಗಾದ ಎಲ್ಲಾ ಸಂತ್ರಸ್ಥೆಯರ ಕುಟುಂಬಕ್ಕೆ ಶಕ್ತಿ ಮತ್ತು ಧೈರ್ಯವನ್ನು ನೀಡಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ನಟಿ ಹರ್ಷಿಕಾ ಪೂಣಚ್ಚ ಪೋಸ್ಟ್ ಮಾಡಿದ್ದಾರೆ.

RELATED ARTICLES

Related Articles

TRENDING ARTICLES