Sunday, May 19, 2024

ಇದು ರಾಜಕೀಯ ಷಡ್ಯಂತ್ರ, ನನ್ನ ಬಂಧನಕ್ಕೆ ಯಾವುದೇ ಪುರಾವೆ ಇಲ್ಲ : ಹೆಚ್​.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು : ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಾಜಿನಗರದ ಬೌರಿಂಗ್ ಆಸ್ಪತ್ರೆ ಬಳಿ ಮಾತನಾಡಿದ ಅವರು, ಯಾವುದೇ ದಾಖಲೆಗಳಿಲ್ಲದೆ, ಸಾಕ್ಷ್ಯಗಳಿಲ್ಲದೆ ನನ್ನನ್ನು ಬಂಧಿಸಲಾಗಿದೆ ಎಂದು ರೇವಣ್ಣ ಆರೋಪಿಸಿದ್ದಾರೆ.

ಇದೊಂದು ದೊಡ್ಡ ರಾಜಕೀಯ ಷಡ್ಯಂತ್ರ. 40 ವರ್ಷದ ರಾಜಕಾರಣದಲ್ಲಿ ಯಾವುದೇ ಆಪಾದನೆ ಇಲ್ಲ. ಷಡ್ಯಂತ್ರ ಮಾಡಿ ನನ್ನ ಮೇಲೆ ಆರೋಪ ಹೊರಿಸಲಾಗಿದೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಅಪಹರಣ ಪ್ರಕರಣದಲ್ಲಿ ನನ್ನ ಬಂಧನಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದ್ದಾರೆ.

ಏಪ್ರಿಲ್ 28ನೇ ತಾರೀಖು ನನ್ನ ಮೇಲೆ ದೂರು ನೀಡಿದ್ದರು. ಯಾವುದೇ ಪುರಾವೆ ಸಿಕ್ಕಿಲ್ಲ ಅಂತ ಕಿಡ್ನಾಪ್ ಕೇಸ್ ಹಾಕಿದ್ದಾರೆ. ಎಲ್ಲಾ ಪೂರ್ತಿ ವಿಷಯ ಹೇಳ್ತೀನಿ. ದುರುದ್ದೇಶದಿಂದಲೇ ನನ್ನನ್ನು ಬಂಧಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದೇವೇಗೌಡರ ನಿವಾಸದಲ್ಲಿಯೇ ರೇವಣ್ಣ ಬಂಧನ

ಮಹಿಳೆಯ ಅಪಹರಣ ಪ್ರಕರಣದಲ್ಲಿ SIT ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಿದ್ದು, ಇದೀಗ ಮತ್ತೆ ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್​ ಮಾಡಲಾಗುತ್ತಿದೆ. ನಿನ್ನೆ (ಮೇ 4ರಂದು) ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿಯೇ ರೇವಣ್ಣ ಬಂಧನವಾಗಿದ್ದು, SIT ಅಧಿಕಾರಿಗಳು ತಮ್ಮ ಕಚೇರಿಗೆ ಕರೆದೊಯ್ದಿದ್ದರು.

RELATED ARTICLES

Related Articles

TRENDING ARTICLES