Sunday, May 19, 2024

ಟಾಸ್ ಗೆದ್ದ ಲಕ್ನೋ ಬೌಲಿಂಗ್ ಆಯ್ಕೆ : KKR ಮಣಿಸಿ 2ನೇ ಸ್ಥಾನಕ್ಕೇರುತ್ತಾ ರಾಹುಲ್ ಪಡೆ

ಬೆಂಗಳೂರು : ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆ.ಎಲ್ . ರಾಹುಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಲಕ್ನೋನಾ ಅಟಲ್ ಬಿಹಾರಿ ವಾಜಪೇಯಿ (ಏಕನಾ) ಸ್ಟೇಡಿಯಂನಲ್ಲಿ ಐಪಿಎಲ್​ನ 54ನೇ ಪಂದ್ಯ ನಡೆಯುತ್ತಿದೆ. ತವರು ಅಂಗಳದಲ್ಲಿ ಇಂದಿನ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆದ್ದರೆ ಲಕ್ನೋ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರುವ ಸಾಧ್ಯತೆಯಿದೆ.

ಸದ್ಯ ಲಕ್ನೋ ಸೂಪರ್ ಜೈಂಟ್ಸ್ 10 ಪಂದ್ಯಗಳನ್ನು ಆಡಿದ್ದು 6 ಪಂದ್ಯಗಳಲ್ಲಿ ಗೆಲುವು ಹಾಗೂ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಕೋಲ್ಕತ್ತಾ ನೈಟ್​ ರೈಡರ್ಸ್ ಸಹ 10 ಪಂದ್ಯಗಳನ್ನು ಆಡಿದೆ. ಈ ಪೈಕಿ 7 ಪಂದ್ಯಗಳನ್ನು ಗೆದ್ದು 3 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ.

ಲಕ್ನೋ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಕೋಲ್ಕತ್ತಾ 14 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಪಂಜಾಬ್​ ವಿರುದ್ಧ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್​ 3ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಇಂದು ಲಕ್ನೋ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಮತ್ತಷ್ಟು ಬದಲಾವಣೆ ಆಗಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್

ಫಿಲಿಪ್ ಸಾಲ್ಟ್(ವಿ.ಕೀ.), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.

ಕೋಲ್ಕತ್ತಾ ಇಂಪ್ಯಾಕ್ಟ್ ಪ್ಲೇಯರ್ಸ್ : ಅನುಕೂಲ್ ರಾಯ್, ಮನೀಶ್ ಪಾಂಡೆ, ಶ್ರೀಕರ್ ಭರತ್, ಶೆರ್ಫೇನ್ ರುದರ್‌ಫೋರ್ಡ್, ವೈಭವ್ ಅರೋರಾ.

ಲಕ್ನೋ ಸೂಪರ್ ಜೈಂಟ್ಸ್

ಕೆ.ಎಲ್. ರಾಹುಲ್ (ವಿ.ಕೀ./ನಾಯಕ), ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಷ್ಟನ್ ಟರ್ನರ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಮೊಹ್ಸಿನ್ ಖಾನ್, ಯಶ್ ಠಾಕೂರ್.

ಲಕ್ನೋ ಇಂಪ್ಯಾಕ್ಟ್ ಪ್ಲೇಯರ್ಸ್ : ಅರ್ಶಿನ್ ಕುಲಕರ್ಣಿ, ಮಣಿಮಾರನ್ ಸಿದ್ಧಾರ್ಥ್, ಕೃಷ್ಣಪ್ಪ ಗೌತಮ್, ಯುಧ್ವೀರ್ ಸಿಂಗ್, ದೇವದತ್ ಪಡಿಕ್ಕಲ್

RELATED ARTICLES

Related Articles

TRENDING ARTICLES