Saturday, May 18, 2024

ಪ್ರಜ್ವಲ್‌ ರಾಸಲೀಲೆ ಕೇಸ್‌: ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ: ಕಾಂಗ್ರೆಸ್‌ನವರು ಗ್ಯಾರಂಟಿ ಯೋಜನೆಗಳಿಂದ ಆಸಕ್ತಿ ಕಳೆದುಕೊಂಡು ಹಾಸನದ ಪೆನ್‌ಡ್ರೈವ್‌ ಹಗರಣವನ್ನೇ ನೆಚ್ಚಿಕೊಂಡಿದ್ದಾರೆ. ಇದು ಚುನಾವಣೆಯಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಳೆದ ವಾರದವರೆಗೂ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಬಗ್ಗೆಯೇ ಮಾತನಾಡುತ್ತಿದ್ದರು. ಮೊದಲ ಹಂತದ ಚುನಾವಣೆಗೆ ಎರಡು ದಿನ ಮುಂಚಿತವಾಗಿ ಈ ಪೆನ್‌ಡ್ರೈವ್‌ ಬಿಡುಗಡೆ ಆಯಿತು. ಆಗಿನಿಂದ ಗ್ಯಾರಂಟಿ ಯೋಜನೆಗಳನ್ನೆಲ್ಲ ಮರೆತು ಬರೀ ಪೆನ್‌ಡ್ರೈವ್‌ ಜಪ ಮಾಡುತ್ತಿದ್ದಾರೆ. ಈ ವಿಚಾರವೇ ತಮಗೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ತಂದುಕೊಂಡು ಬರುತ್ತದೆ ಎಂಬ ಭ್ರಮೆಯಲ್ಲಿದ್ದಾರೆ ಕಾಂಗ್ರೆಸ್ಸಿಗರು ಟೀಕಿಸಿದರು.

ಇದನ್ನೂ ಓದಿ: ಒಕ್ಕಲಿಗ ನಾಯಕತ್ವಕ್ಕಾಗಿಯೇ ನಡೀತಾ ವಿಡಿಯೋ ಪ್ರಕರಣ? : ಪ್ರಜ್ವಲ್ ಪ್ರಕರಣಕ್ಕೆ ಬಿಗ್ ಟಿಸ್ಟ್

ಹಾಗಂತ ಪೆನ್‌ಡ್ರೈವ್‌ ಪ್ರಕರಣವನ್ನು ನಾವೇನು ಬೆಂಬಲಿಸುವುದಿಲ್ಲ. ಅದನ್ನು ನಾವಷ್ಟೇ ಅಲ್ಲ. ಯಾರೊಬ್ಬರು ಬೆಂಬಲಿಸುವಂತೆಯೂ ಇಲ್ಲ ಎಂದರು. ಈ ವಿಷಯದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಯಾರೇ ಆಗಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಅತಿ ಕಠಿಣವಾದ ಶಿಕ್ಷೆಯಾಗಬೇಕು. ಈ ಸಂಬಂಧ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದೂ ಆಗಿದೆ. ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES