Saturday, May 18, 2024

ಕುಸ್ತಿಪಟು ಭಜರಂಗ್​ ಪುನಿಯಾ ಅನಿರ್ಧಿಷ್ಟಾವಧಿಗೆ ಅಮಾನತು ಮಾಡಿದ NADA

ನವದೆಹಲಿ: ಕುಸ್ತಿಪಟು ಭಜರಂಗ್​ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA)  ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ ಇದರೊಂದಿಗೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಅವರ ಪ್ರಯತ್ನಕ್ಕೆ ಹಿನ್ನಡೆಯಾಗಲಿದೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ

ಇದೇ ಮಾರ್ಚ್ 10 ರಂದು ಸೋನೆಪತ್‌ನಲ್ಲಿ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಭಜರಂಗ್ ಪುನಿಯಾಮೂತ್ರದ ಮಾದರಿ ನೀಡುವಂತೆ ಕೇಳಿದ್ದರೂ ಅವರು ನಿಗದಿತ ಸಮಯದ ಒಳಗಡೆ ನೀಡಿಲ್ಲ ಎಂದು ನಾಡಾ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಭವಿಷ್ಯದ ಯಾವುದೇ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಅಮಾನತುಗೊಳಿಸುವ ಆದೇಶವನ್ನು ನಾಡಾ ಹೊರಡಿಸಿದೆ ಎಂದು ಮೂಲಗಳು ತಿಳಿಸಿದೆ.

ಈ ನಾಡಾ ಮೂತ್ರದ ಮಾದರಿಯನ್ನು ನೀಡದ್ದು ಯಾಕೆ ಎನ್ನುವುದರ ಬಗ್ಗೆ ಲಿಖಿತವಾಗಿ ಕಾರಣವನ್ನು ಮೇ 7ರ ಒಳಗಡೆ ತಿಳಿಸಬೇಕು. ಒಂದು ವೇಳೆ ಈ ಅವಧಿಯ ಒಳಗಡೆ ಸರಿಯಾದ ಕಾರಣ ನೀಡದೇ ಇದ್ದರೆ ಮುಂದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

RELATED ARTICLES

Related Articles

TRENDING ARTICLES