Sunday, May 19, 2024

Shocking Video : ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಬಾಲ್ ಬಿದ್ದು ಬಾಲಕ ಸಾವು

ಪುಣೆ : ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಮನುಷ್ಯನಿಗೆ ಯಾವುದೇ ಸಮಯದಲ್ಲಿ ಸಾವು ಬರಬಹುದು.

ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಬಾಲ್ ಮರ್ಮಾಂಗಕ್ಕೆ ಬಡಿದು 11 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಶೌರ್ಯ ಮೃತಪಟ್ಟಿರುವ ಬಾಲಕ. ಬ್ಯಾಟರ್ ಬಾಲನ್ನು ನೇರವಾಗಿ ತನ್ನತ್ತ ಹೊಡೆದಾಗ ಶೌರ್ಯ ಎಂಬ ಬಾಲಕ ಬೌಲಿಂಗ್ ಮಾಡುತ್ತಿದ್ದ. ವೇಗವಾಗಿ ಬಂದ ಚೆಂಡು ಶೌರ್ಯನ ಮರ್ಮಾಂಗಕ್ಕೆ ಬಡಿದಿದ್ದರಿಂದ, ಆತ ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ.

ಕೂಡಲೇ ಬಾಲಕನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ದುರಾದೃಷ್ಟವಶಾತ್ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದ ದೃಶ್ಯವನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೇಲ್ನೋಟಕ್ಕೆ ಬಾಲಕನು ಆಕಸ್ಮಿಕವಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. 11 ವರ್ಷದ ಶೌರ್ಯ ಕ್ರಿಕೆಟ್‌ನಲ್ಲಿ ಕಠಿಣ ಅಭ್ಯಾಸ ಮಾಡಿ ಒಳ್ಳೆಯ ಕ್ರಿಕೆಟರ್ ಆಗುವ ಕನಸು ಕಂಡಿದ್ದ. ಆದರೆ, ಆಕಸ್ಮಿಕವಾಗಿ ಸಂಭವಿಸಿದ ಘಟನೆಯಿಂದ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

An 11-year-old boy died after a ball hit his private part while he was playing cricket with his friends in Pune. The incident was caught on CCTV camera.#LokmatTimes #PuneIncident #TragicIncident #Cricket pic.twitter.com/FS5hHHwNxU

RELATED ARTICLES

Related Articles

TRENDING ARTICLES