Sunday, May 19, 2024

ಪ್ರಜ್ವಲ್ ಕೇಸ್ ತನಿಖೆ ಮತ್ತಷ್ಟು ಚುರುಕು : ‘ಪರಾರಿ ಪ್ರಜ್ವಲ್’ ಬಂಧನದ ಬಗ್ಗೆ ಸಿದ್ದರಾಮಯ್ಯ ಮಹತ್ವದ ಚರ್ಚೆ

ಬೆಂಗಳೂರು : ಪ್ರಜ್ವಲ್ ರಾಸಲೀಲೆ ಪ್ರಕರಣದ ತನಿಖೆಯನ್ನ SIT ಮತ್ತಷ್ಟು ಚುರುಕುಗೊಳಿಸಿದೆ. ಈಗಾಗಲೇ ಮಾಜಿ ಸಚಿವ  ರೇವಣ್ಣನನ್ನ ಕಸ್ಟಡಿಗೆ ಪಡೆದಿರೋ ಎಸ್​ಐಟಿ, ಸ್ಥಳ ಮಹಜರು ಪ್ರಕ್ರಿಯೆಯನ್ನೂ ಮುಗಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಈ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈ ಸಂಬಂಧ ಪೊಲೀಸ್ ಅಧಿಕಾರಿಗಳನ್ನ ಕರೆಸಿಕೊಂಡು ಮಾಹಿತಿ ಪಡೆದರು.

ಪೋಲಿ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ನಡೆಯುತ್ತಿದೆ. ವಿದೇಶದಲ್ಲಿ ತಲೆ ಮರೆಸಿಕೊಂಡಿರೋ ಪ್ರಜ್ವಲ್​​ಗೆ ಈಗಾಗಲೇ ಲುಕ್ ಔಟ್ ನೋಟಿಸ್ ನೀಡಲಾಗಿದೆ. ಪ್ರಜ್ವಲ್ ಬಂದ ತಕ್ಷಣವೇ  ಬಂಧಿಸಲು ಎಸ್​ಐಟಿ ತಯಾರಿ ನಡೆಸಿದೆ. ಇತ್ತ ಕಿಡ್ನ್ಯಾಪ್​ ಕೇಸ್​ನಲ್ಲಿ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಎಸ್​ಐಟಿ ಕಸ್ಟಡಿಯಲ್ಲಿದ್ದಾರೆ. ಇದೆಲ್ಲದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಪೊಲೀಸ್ ಅಧಿಕಾರಿಗಳನ್ನ ಕರೆಸಿ ಮಾಹಿತಿ ಪಡೆದಿದ್ದಾರೆ.

ಡಿಜಿ-ಐಜಿಪಿ ಅಲೋಕ್ ಮೋಹನ್ ಮತ್ತು ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಸಿಎಂ ನಿವಾಸ ಕಾವೇರಿಗೆ ಭೇಟಿ ನೀಡಿ ಪ್ರಕರಣದ ಕುರಿತು ಮಾಹಿತಿ ನೀಡಿದರು. ಪ್ರಮುಖವಾಗಿ ಈ ಪ್ರಕರಣದ ತನಿಖೆ ಎಲ್ಲಿಗೆ ಬಂದಿದೆ ಅನ್ನೋದರ ಬಗ್ಗೆ ತಿಳಿಸಿದ್ರು. ಆರೋಪಿ ಪ್ರಜ್ವಲ್ ಎಲ್ಲಿದ್ದಾನೆ..? ಯಾವಾಗ ಬರಹುದು ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ರು. ಈ ವೇಳೆ ಮೇ 9ರ ತನಕ ಪ್ರಜ್ವಲ್ ಆಗಮನ ಅನುಮಾನ ಅಂತ ಪೊಲೀಸ್ ಅಧಿಕಾರಿಗಳು ಸಿಎಂಗೆ ತಿಳಿಸಿದ್ದಾರೆ.

ಯಾವುದೇ ರಾಜಕೀಯ ಬೆರಸುವುದಿಲ್ಲ

ಇನ್ನು, ಪೆನ್ ಡ್ರೈವ್​​​ನ ರಾಜಕೀಯ ದುರುದ್ದೇಶಕ್ಕೆ ಬಳಕೆ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ಶಾಸಕ ಸಿ.ಎನ್. ಬಾಲಕೃಷ್ಣ ಆರೋಪಿಸಿದ್ದಾರೆ. ಜೆಡಿಎಸ್​ ಶಾಸಕರ ಆರೋಪಕ್ಕೆ ತಿರುಗೇಟು ನೀಡಿರೋ ಕೃಷಿ ಸಚಿವ ಚಲುವರಾಯಸ್ವಾಮಿ, ಇದರಲ್ಲಿ ಯಾವುದೇ ರಾಜಕೀಯ ಬೆರಸುವುದಿಲ್ಲ. ಅದರ ಅವಶ್ಯಕತೆ ನಮ್ಗೆ ಇಲ್ಲ ಎಂದು ಹೇಳಿದ್ದಾರೆ.

ಒಟ್ನಲ್ಲಿ, ಪ್ರಜ್ವಲ್​ ರಾಸಲೀಲೆ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಇಷ್ಟು ದಿನ ಚುನಾವಣೆಯಲ್ಲಿ ಬ್ಯುಸಿ ಇದ್ದ ಸಿದ್ದರಾಮಯ್ಯ ಇದೀಗ ಈ ಕೇಸ್ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES