Sunday, May 19, 2024

ವಿಚಾರಣೆಗೆ ಹಾಜರಾಗುವಂತೆ ಪಜ್ವಲ್​ ಮೇಲೆ ಕುಟುಂಬಸ್ಥರ ಒತ್ತಡ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್​ಗೆ ಇದೀಗ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ ಹೆಚ್ಚಾಗಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಅರೋಪಿ ಪ್ರಜ್ವಲ್​​ ಮೇಲೆ ರೇವಣ್ಣ ಕುಟುಂಬಸ್ಥರು ಮತ್ತು ಆಪ್ತರು ಒತ್ತಡ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಡಿಯೋ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಈ ವೇಳೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ಇರುವುದು ಕುಟುಂಬ ಮತ್ತು ಪಕ್ಷಕ್ಕೆ ಮತ್ತಷ್ಟು ಮುಜುಗರವನ್ನು ಉಂಟುಮಾಡುತ್ತದೆ. ಮೊದಲು ಎಸ್​​ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸು. ನಂತರ ಕಾನೂನು ಹೋರಾಟದಿಂದ ಪ್ರಕರಣದ ಸತ್ಯಾಂಶ ಹೊರಬರುತ್ತದೆ.

ಇದನ್ನೂ ಓದಿ: ಕಾಂಗ್ರೆಸ್​ ಮಾಜಿ ಶಾಸಕ ಡಾ.ನಾಗರೆಡ್ಡಿ ವಿಧಿವಶ

ವಿಚಾರಣೆಗೆ ಹಾಜರಾಗದೆ ಕಾನೂನು ಹೋರಾಟಕ್ಕೆ ಮೊರೆ ಹೋದರೆ ಮತ್ತಷ್ಟು ಸಮಸ್ಯೆ ಆಗುತ್ತದೆ. ಈಗಾಗಲೇ ಈ ಪ್ರಕರಣದಿಂದ ಸಾಕಷ್ಟು ಡ್ಯಾಮೇಜ್ ಆಗುತ್ತಿದೆ. ಹೀಗಾಗಿ ಕೂಡಲೇ ವಕೀಲರ ಜೊತೆ ಸಮಾಲೋಚನೆ ನಡೆಸಿ ವಿಚಾರಣೆಗೆ ಹಾಜರಾಗುವಂತೆ ಕುಟುಂಬಸ್ಥರು ಪ್ರಜ್ವಲ್ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES