Sunday, May 19, 2024

ಪ್ರಜ್ವಲ್​ ರೇವಣ್ಣನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ ಸ್ಥಾಪನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್​ ರೇವಣ್ಣನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರಿಗಾಗಿಯೇ SIT ವಿಶೇಷ ತನಿಖಾ ತಂಡದ ವತಿಯಿಂದ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು ಇದರ ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ.

ಪ್ರಜ್ವಲ್​ ರೇವಣ್ಣ ರಾಸಲೀಲೆಗಳ ಪೆನ್​ಡ್ರೈವ್​ ಪ್ರಕರಣದಲ್ಲಿ ಸಂತ್ರಸ್ತರ ಸಂಖ್ಯೆ ಹೆಚ್ಚಾಗಿದ್ದು ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು. ಸಂತ್ರಸ್ತ ಮಹಿಳೆಯರು 6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.

ಇದನ್ನೂ ಓದಿ:  ನಮ್ಮ ಮೆಟ್ರೋದಲ್ಲಿ ಪ್ರೇಮಿಗಳ ಸರಸ: ಜನರಿಂದ ಭಾರಿ ಆಕ್ರೋಶ

ಇನ್ನು ಈ ಮೇಲ್ಕಂಡ ಸಂಖ್ಯೆಗೆ ಸಂಪರ್ಕಿಸುವ ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES