Sunday, May 19, 2024

ಪ್ರಜ್ವಲ್​ ಒಬ್ಬ ಮುಸ್ಲಿಂ ಆಗಿದ್ದಿದ್ದರೇ ಸುಮ್ಮನೆ ಬಿಡುತ್ತಿದ್ದರಾ ಮೋದಿ: ಸ್ವರಾ ಭಾಸ್ಕರ್​ ಆಕ್ರೋಶ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸ್ಫೋಟಕ ಸುದ್ದಿಯನ್ನು ಪವರ್ ಟಿವಿ ಪ್ರಸಾರ ಮಾಡಿದ ಬೆನ್ನಲ್ಲೇ ದೇಶ ವಿದೇಶಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಹಲವು ಸೆಲೆಬ್ರಿಟಿಗಳು ಹಾಗು ಮುಖಂಡರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಇದೀಗ ಈ ಕುರಿತು ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಸೋಶಿಯಲ್ ಮೀಡಿಯಾ ಮೂಲಕ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಸ್ವರಾ ಭಾಸ್ಕರ್​ ಅವರು, ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೌನವಾಗಿರುವುದು ಏಕೆ..? ಗೊತ್ತಿದ್ದೂ ಮೋದಿ ಪ್ರಜ್ವಲ್​ ಪರ ಪ್ರಚಾರ ಮಾಡಿದ್ದು ನಮಗೆ ಆಘಾತ ತಂದಿದೆ. ಕಥುವಾ, ಉನ್ನಾವೋ, ಹತ್ರಾಸ್, ಕುಲದೀಪ್ ಸೆಂಗರ್, ಬ್ರಿಜ್‌ ಭೂಷಣ್ ಶರಣ್ ಮತ್ತು ಇತರರ ಉದಾಹರಣೆ ನಮ್ಮಲ್ಲಿದೆ. ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ ಇಲ್ಲವೇ ಕಾಂಗ್ರೆಸ್‌ನವರಾಗಿದ್ದರೆ ಮಾತ್ರ ಅವರು ಮಹಿಳಾ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾರೆ ಅಂತ ಸ್ವರಾ ಭಾಸ್ಕರ್ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಪಜ್ವಲ್​ ಮೇಲೆ ಕುಟುಂಬಸ್ಥರ ಒತ್ತಡ

ಹಾಸನ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಅವರ ಸೆಕ್ಸ್ ವೀಡಿಯೋಗಳು ಹಾಸನದ ಹಲವು ಕಡೆ ಓಡಾಡುತ್ತಿದ್ದಂತೆ ಪ್ರಜ್ವಲ್ ರೇವಣ್ಣ ರಾಜ್ಯದಿಂದ ನಾಪತ್ತೆಯಾಗಿದ್ದಾರೆ. ರಾಜ್ಯ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ಆಡಳಿತಾರೂಢ ಕಾಂಗ್ರೆಸ್ ಟೀಕಿಸಿತ್ತು. ಈ ಪ್ರಕರಣ ಪರಸ್ಪರ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.

RELATED ARTICLES

Related Articles

TRENDING ARTICLES