Sunday, May 19, 2024

ಇನ್ನು 5 ದಿನಗಳಲ್ಲಿ ರಾಜ್ಯಾದಂತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ 5 ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದರೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ. ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಾಧಾರಣ ಮಳೆಯಾಗಲಿದೆ. ಮೇ 7ರಂದು ನಗರದಲ್ಲಿ ಗುಡುಗು ಮಿಂಚಿನೊಂದಿಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಸದ್ಯ ಒಂದು ದಿನ ಭಾರೀ ಬಿಸಿಲು ಇದ್ದರೆ ಮತ್ತೊಂದು ದಿನ ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಮುಂದುವರಿದಿದೆ. ಮೇ 6 ರಿಂದ ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಮೇ 6ರಂದು ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

RELATED ARTICLES

Related Articles

TRENDING ARTICLES