Sunday, May 19, 2024

ಟಾಸ್ ಗೆದ್ದ MI ಬೌಲಿಂಗ್ ಆಯ್ಕೆ : SRHಗೆ ಕನ್ನಡಿಗ ಕಂಬ್ಯಾಕ್, ಇಂದಾದರೂ ಮುಂಬೈ ಗೆಲ್ಲುತ್ತಾ?

ಬೆಂಗಳೂರು : ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್​ ಗೆದ್ದಿರುವ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಮುಂಬೈನ ವಾಂಖೆಡೆ ಸ್ಟೇಡಿಯಂ ಐಪಿಎಲ್​ನ 55ನೇ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದೆ. ಇದು ಮುಂಬೈ ಇಂಡಿಯನ್ಸ್​ಗೆ ನಿರ್ಣಾಯಕ ಪಂದ್ಯವಾಗಿದೆ.

ಸತತ ಸೋಲುಗಲಿಂದ ಕಂಗೆಟ್ಟಿರುವ ಮುಂಬೈ ಇಂದಿನ ಪಂದ್ಯ ಗೆದ್ದರೆ ಮಾತ್ರ ಪ್ಲೇಆಫ್​ ಆಸೆ ಜೀವಂತವಾಗಿರಲಿದೆ. ಹೈದರಾಬಾದ್ ಗೆದ್ದರೆ ಪ್ಲೇಆಫ್​ಗೆ ಮತ್ತಷ್ಟು ಹತ್ತಿರವಾಗಲಿದೆ. ಈ ಆವೃತ್ತಿಯಲ್ಲಿ ಸಾರ್ವಕಾಲಿಕ ದಾಖಲೆಗಳನ್ನು ಮುರಿಯುತ್ತಿರುವ ಹೈದರಾಬಾದ್ ಇಂದಿನ ಪಂದ್ಯದಲ್ಲಿ ಯಾವ ದಾಖಲೆ ಸೃಷ್ಟಿಸಲಿದೆ ಎಂದು ಕಾದುನೋಡಬೇಕಿದೆ.

ಸದ್ಯ ಮುಂಬೈ 11 ಪಂದ್ಯಗಳನ್ನು ಆಡಿದ್ದು, 3 ಪಂದ್ಯಗಳನ್ನು ಮಾತ್ರ ಗೆದ್ದಿದೆ. 8 ಪಂದ್ಯಗಳಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹೈದರಾಬಾದ್ 10 ಪಂದ್ಯಗಳನ್ನು ಆಡಿದ್ದು, 6 ಪಂದ್ಯಗಳಲ್ಲಿ ಗೆಲುವು ಹಾಗೂ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಪಾಯಿಂಟ್ ಪಟ್ಟಿಯಲ್ಲಿ ಹೈದರಾಬಾದ್ 4ನೇ ಸ್ಥಾನದಲ್ಲಿದೆ.

ಸನ್‌ರೈಸರ್ಸ್ ಹೈದರಾಬಾದ್

ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿ.ಕೀ.), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ. ನಟರಾಜನ್

ಮುಂಬೈ ಇಂಡಿಯನ್ಸ್

ಇಶಾನ್ ಕಿಶನ್ (ವಿ.ಕೀ.), ರೋಹಿತ್ ಶರ್ಮಾ, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ನಾಯಕ), ಟಿಮ್ ಡೇವಿಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ

RELATED ARTICLES

Related Articles

TRENDING ARTICLES