Sunday, May 19, 2024

ಮಹಾ’ಕಾಮಿ ಪ್ರಜ್ವಲ್’ ವಿರುದ್ಧ ಮತ್ತೊಂದು ರೇಪ್ ಕೇಸ್ ದಾಖಲು

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನಕ್ಕೊಂದು ಟ್ವಿಸ್ಟ್​ ಪಡೆಯುತ್ತಿದ್ದು, ಮಹಾಕಾಮಿ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್​ ರೇವಣ್ಣ ಮೇಲೆ 3ನೇ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಪ್ರಜ್ವಲ್​ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ತನಿಖೆ ಚುರುಕುಗೊಳಿಸಿರುವ ಎಸ್​ಐಟಿ ಅಧಿಕಾರಿಗಳು, ಇಂದು ಸಂತ್ರಸ್ಥೆಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ಹೇಳಿಕೆ ಆಧರಿಸಿ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಸೈಬರ್ ಸೆಲ್ ಠಾಣೆಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ.

ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿಕೆ

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿತರಾಗಿರುವ ಶಾಸಕ ಎಚ್.ಡಿ ರೇವಣ್ಣ ಅವರು ಇದೀಗ ಮತ್ತೆ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ವಿಚಾರಣೆಯನ್ನ ಕೋರ್ಟ್ ನಾಳೆಗೆ ಮುಂದೂಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣರನ್ನು ಎಸ್​ಐಟಿ ಬಂಧಿಸಿ ಕಸ್ಟಡಿಗೆ ತೆಗೆದುಕೊಂಡಿದೆ. ಬಂಧನಕ್ಕೂ ಮುನ್ನ ಹೆಚ್.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿಯನ್ನ ಕೋರ್ಟ್ ವಜಾಗೊಳಿಸಿತ್ತು. ಇದೀಗ ಮತ್ತೊಂದು ಅರ್ಜಿಯನ್ನ ಸಲ್ಲಿಕೆ ಮಾಡಿದ್ದು ವಿಚಾರಣೆ ನಾಳೆಗೆ ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES

Related Articles

TRENDING ARTICLES