Sunday, May 19, 2024

ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಮತ್ತೆ ಬಂಧನ

ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್​ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಎಸ್​ಐಟಿಗೆ ವರ್ಗಾವಣೆ ಆಗಿತ್ತು. 2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಇನ್ಮುಂದೆ ನಾಯಿಗಳಿಗೆ ಇಷ್ಟ ಬಂದಾಗ ಊಟ ಹಾಕುವಂತಿಲ್ಲ: ಬಿಬಿಎಂಪಿ

2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು. ಅಲ್ಲದೆ ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್​ ಜಾಲತಾಣ ಹ್ಯಾಕ್​ ಮಾಡಿದ್ದನು.

RELATED ARTICLES

Related Articles

TRENDING ARTICLES