Sunday, October 6, 2024

ಟಾಸ್ ಗೆದ್ದ RR ಬೌಲಿಂಗ್ ಆಯ್ಕೆ : ಇಂದಿನ ಪಂದ್ಯದಲ್ಲಿ ಡೆಲ್ಲಿ ಗೆದ್ದರೆ RCBಗೆ ಕಂಟಕ?

ಬೆಂಗಳೂರು : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಐಪಿಎಲ್​ನ 56ನೇ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಇಂದಿನ ಪಂದ್ಯ ಗೆದ್ದರೆ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್​ ಪ್ಲೇಆಫ್​ ಕನಸು ನಿರ್ಧಾರವಾಗಲಿದೆ. ಅಲ್ಲದೆ, ಆರ್​ಸಿಬಿ ಪ್ಲೇಆಫ್​ ಪ್ರವೇಶಕ್ಕೆ ಕಂಟಕವಾಗಲಿದೆ. ಆದರೆ, ಬಲಿಷ್ಠ ರಾಜಸ್ಥಾನ ವಿರುದ್ಧ ಡೆಲ್ಲಿಗೆ ಗೆಲುವು ಅಷ್ಟು ಸುಲಭವಲ್ಲ.

ಪ್ರಸಕ್ತ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್​ 10 ಪಂದ್ಯಗಳನ್ನು ಆಡಿದೆ. ಈ ಪೈಕಿ 8 ಪಂದ್ಯಗಳನ್ನು ಗೆದ್ದು, ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಡೆಲ್ಲಿ ಕ್ಯಾಪಿಟಲ್ಸ್​ 11 ಪಂದ್ಯಗಳನ್ನು ಆಡಿದ್ದು 5 ಪಂದ್ಯಗಳಲ್ಲಿ ಗೆಲುವು ಹಾಗೂ 6 ಪಂದ್ಯ ಸೋತಿದೆ. ರಾಜಸ್ಥಾನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಡೆಲ್ಲಿ 6ನೇ ಸ್ಥಾನದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್

ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಬ್ ಪಂತ್ (ನಾಯಕ/ವಿ.ಕೀ.), ಟ್ರಿಸ್ಟಾನ್ ಸ್ಟಬ್ಸ್, ಗುಲ್ಬದಿನ್ ನೈಬ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಇಶಾಂತ್ ಶರ್ಮಾ, ಖಲೀಲ್ ಅಹ್ಮದ್

ರಾಜಸ್ಥಾನ್ ರಾಯಲ್ಸ್

ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ.), ರಿಯಾನ್ ಪರಾಗ್, ಡೊನೊವನ್ ಫೆರೇರಾ, ರೋವ್ಮನ್ ಪೊವೆಲ್, ಶುಭಂ ದುಬೆ, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್

RELATED ARTICLES

Related Articles

TRENDING ARTICLES