Monday, May 20, 2024

ಪ್ರಜ್ವಲ್ ಕೇಸ್ ಹಿಂದೆ ಡಿಕೆಶಿ, ಸಿದ್ದರಾಮಯ್ಯ ಇದ್ದಾರೆ : ಆರಗ ಜ್ಞಾನೇಂದ್ರ ಆರೋಪ

ಶಿವಮೊಗ್ಗ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಇದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿರುವ ಅವರು, ಪೆನ್​ಡ್ರೈವ್ ಹಂಚಿದವರನ್ನು ಸರ್ಕಾರ ಗಮನಿಸುತ್ತಿಲ್ಲ. ಇಂತಹ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಇದು ನಾಚಿಗೇಡು, ಹೇಸಿಗೆಯ ರಾಜಕೀಯ ಇದು ಎಂದು ಟೀಕಿಸಿದ್ದಾರೆ.

ಈ ಕೃತ್ಯವನ್ನು ನಾನು ಖಂಡಿಸುತ್ತೇನೆ. ಅಪರಾಧ ಮಾಡಿದವರನ್ನು ದಂಡಿಸಬೇಕು. ಈ ಪ್ರಕರಣವನ್ನು ಎಸ್‌ಐಟಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಪೆನ್​ಡ್ರೈವ್ ವಿತರಣೆ ಮಾಡಿದವರು ಕೂಡ ಅಷ್ಟೇ ದೊಡ್ಡ ಅಪರಾಧಿಗಳು ಎಂದು ಹೇಳಿದ್ದಾರೆ.

ಒಂದು ಕುಟುಂಬ ಮುಗಿಸಲು ತಂತ್ರ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಎರಡ್ಮೂರು ಪ್ರಕರಣ ಆಗಿದೆ. ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರಿಗೆ ನೋವುಂಟು ಮಾಡಬೇಕು ಎನ್ನುವುದು ಇದರ ಹಿಂದೆ ಇದೆ. ಒಕ್ಕಲಿಗ ನಾಯಕತ್ವದ ಪ್ರಶ್ನೆ ಈ ಪ್ರಕರಣದ ಹಿಂದೆ ಇದೆ. ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ ನಡೆಯುತ್ತಿದೆ. ಈ ಪ್ರಕರಣದ ಹಿಂದೆ ಡಿ.ಕೆ. ಶಿವಕುಮಾ‌ರ್, ಸಿದ್ದರಾಮಯ್ಯ ಇದ್ದಾರೆ ಎಂದು ಆರೋಪಿಸಿದ್ದಾರೆ.

ತನಿಖೆ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ

ಎಸ್‌ಐಟಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಸಿಎಂ, ಡಿಸಿಎಂ ಮಾರ್ಗದರ್ಶನದಲ್ಲಿ ಈ ತನಿಖೆ ನಡೆಯುತ್ತಿದೆ. ಕೂಡಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ ಎಂದು ಆರಗ ಜ್ಞಾನೇಂದ್ರ ದೂರಿದ್ದಾರೆ.

RELATED ARTICLES

Related Articles

TRENDING ARTICLES